logo

ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ: ಶಿರಾ ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ಪ್ರಗತಿಯ ಹೊಸ ಹೆಜ್ಜೆ

ಶಿರಾ ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಿಜಿಟಲ್ ಗ್ರಂಥಾಲಯ ಕೇಂದ್ರವನ್ನು ಗೌಡಗೆರೆ ಗ್ರಾಮ ಪಂಚಾಯಿತಿ ವತಿಯಿಂದ ಉದ್ಘಾಟನೆ ಮಾಡಿ ಮಾತನಾಡಿದ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಟಿ.ಬಿ. ಜಯಚಂದ್ರ ಅವರು, "ಗ್ರಾಮೀಣ ಮಕ್ಕಳಿಗೆ ಡಿಜಿಟಲ್ ಜ್ಞಾನವು ಇಂದಿನ ತಾಂತ್ರಿಕ ಯುಗದಲ್ಲಿ ಅತ್ಯವಶ್ಯಕ. ಈ ಗ್ರಂಥಾಲಯವು ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಹೊಸ ಜ್ಞಾನದ ಕಿಟಕಿ ಆಗಿ ಬೆಳೆಯಲಿ" ಎಂದು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್, ಗೌಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ಗೌಡಪ್ಪ, ಉಪಾಧ್ಯಕ್ಷೆ ಮಂಜುಳಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಮೂರ್ತಿ ಹಾಗೂ ಹಲವು ಗ್ರಾಮಸ್ಥರು ಭಾಗವಹಿಸಿದ್ದರು.

ಗ್ರಾಮೀಣ ಶಿಕ್ಷಣ ಅಭಿವೃದ್ಧಿಗೆ ಈ ಡಿಜಿಟಲ್ ಗ್ರಂಥಾಲಯ ನವದಿಗಂತವನ್ನು ತರುವ ನಿರೀಕ್ಷೆಯಿದೆ.



0
0 views