
*ಕೆ.ಆರ್.ಪೇಟೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು ಇವುಗಳ ಪ್ರಗತಿಗೆ ಆಧ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಬ
*ಕೆ.ಆರ್.ಪೇಟೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು ಇವುಗಳ ಪ್ರಗತಿಗೆ ಆಧ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಬಿ. ವರದರಾಜೇಗೌಡ ಹೇಳಿದರು.*
ತಾಲೂಕಿನ ಬೂಕನಕೆರೆ ಹೋಬಳಿಯ ಬಳ್ಳೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶದ ಜನತೆ ಕೃಷಿ ಪತ್ತಿನ ಸಹಕಾರ ಸಂಘಗಳು ತುಂಬ ಅನುಕೂಲವಾಗಿವೆ. ಇವುಗಳನ್ನು ಸಾಲ ಪಡೆದುಕೊಂಡು ಕೃಷಿ ಚಟುವಟಿಕೆಗೆ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬಹದು ಎಂದ ಅವರು
ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳು ಇದ್ದರೂ ಸಹ ರೈತರು ಇದನ್ನೇ ಅವಲಂಭಿಸಿದ್ದಾರೆ. ಸರಕಾರ ಕೂಡ ಅವರಿಗೆ ಶೂನ್ಯ ಬಡ್ಡಿ ದರಲ್ಲಿ ಸಾಲ ದೊರೆಯುತ್ತದೆ. ಇದನ್ನು ಸಂಪೂರ್ಣವಾಗಿ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
*ಬಳಿಕ ಮಾತನಾಡಿದ ಸಂಘದ ನಿರ್ದೇಶಕ ಬಿ.ಎ ಸುರೇಶ್* ಸಂಘದಿಂದ ಸಾಲ ಪಡೆದುಕೊಂಡು ಹೈನುಗಾರಿಕೆ ಹಾಗೂ ನೀರಾವರಿ ಸೇರಿದಂತೆ ಇನ್ನಿತರ ಚಟುವಟಿಕೆಗೆ ಹಣ ಬಳಸಿಕೊಳ್ಳಬೇಕು ಎಂದರು. ಎಂಡಿಸಿಸಿ ಬ್ಯಾಂಕ್ ವತಿಯಿಂದ ರೈತರಿಗೆ ಸಾಕಷ್ಟು ಸೌಲಭ್ಯ ನೀಡಲಾಗುತ್ತದೆ. ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು
ಸಂಘದ ಕಾರ್ಯದರ್ಶಿ ಇಂದುಮತಿ 2024 -25ನೇ ಸಾಲಿನ ಸಂಘದ ಆಡಿಟ್ ವರದಿ ಮಂಡಿಸಿ ಲಾಭವಿಲೆವರಿ ಮಾಡಿ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳು ಎಸ್.ಎಸ್.ಎಲ್.ಸಿ ನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಎಂಡಿಸಿಸಿ ಬ್ಯಾಂಕ್ ಮೇಲ್ವಿಚಾರಕರ ರಾಘವೇಂದ್ರ ಸಂಘದ ಉಪಾಧ್ಯಕ್ಷೆ ಮೊಸಳೆ ಕೊಪ್ಪಲು ಲೀಲಾವತಿ, ನಿರ್ದೇಶಕರಾದ ಬಿ.ಎ ಸುರೇಶ, ನಟೇಶ್,ಎಚ್.ರಾಮೇಗೌಡ,ಹರೀಶ್,ಕೃಷ್ಣೇಗೌಡ, ಸಿದ್ದರಾಜು, ಶಂಕರೇಗೌಡ, ಕೆ.ಜಿ ವಿಜಯ್ ಕುಮಾರ್,ಭಾಗ್ಯಮ್ಮ,ನೀಲಮ್ಮ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಂದುಮತಿ, ಗುಮಸ್ತೆ ದಿವ್ಯ, ಸೇರಿದಂತೆ ಗ್ರಾಮಸ್ಥರಿದ್ದರು.
*ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ*