logo

ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿ ಬೋಧನೆ ಸಮಾನತೆಯಿಂದ ಜೀವನ ನಡೆಸಲು ಸಂವಿಧಾನ ಬಹುಮುಖ್ಯ:ಕೆ.ಸಿ.ಮಂಜುನಾಥ್

ದೇವನಹಳ್ಳಿ: ಸಂವಿಧಾನವನ್ನು ಗೌರವಿಸಿ ಅನುಸರಿಸುವ ದಿನವಾಗಿದ್ದು, ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ಸಮಾಜದಲ್ಲಿ ಸಮಾನತೆಯಿಂದ ಜೀವನ ನಡೆಸಲು ಸಂವಿಧಾನ ಬಹುಮುಖ್ಯ ಎಂದು ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ.ಮಂಜುನಾಥ್ ಹೇಳಿದರು.

ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ಬ್ಲಾಕ್ ಕಾಂಗ್ರೇಸ್ ಪಕ್ಷದ ವತಿಯಿಂದ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಸಂವಿಧಾನ ಪೀಠಿಕೆಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿ ಮಾತನಾಡಿ ಸಂವಿಧಾನದಿಂದ ನಾವೆಲ್ಲರೂ ನಮಗೆ ಲಭಿಸಿರುವ ಹಕ್ಕುಗಳನ್ನು ಬಳಸಿಕೊಂಡು ಸ್ವತಂತ್ರವಾಗಿ ಮಾತನಾಡುತ್ತಿದ್ದೇವೆ ಎಂದರು.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿ.ಶಾಂತಕುಮಾರ್ ಮಾತನಾಡಿ ಸಂವಿಧಾನ ರಚಿಸಿದ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಅವರ ಜೊತೆ ಇದ್ದಂತಹ ಮಹಾನ್ ವ್ಯಕ್ತಿಗಳಿಗೆ ಗೌರವ ನೀಡಬೇಕು, ಯಾವುದೇ ಕಾರಣಕ್ಕೂ ಸಂವಿಧಾನಕ್ಕೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಮಹಿಳಾ ಘಟಕದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷೆ ರಾಧಾ ರೆಡ್ಡಿ ಮಾತನಾಡಿ, ಶಾಸಕಾಂಗ, ಕಾರ್ಯಂಗ, ನ್ಯಾಯಾಂಗ ಹಾಗೂ ಮಾಧ್ಯಮ

ಅಂಗವು ಸಂವಿಧಾನದಿಂದ ರೂಪುಗೊಂಡಿದೆ, ಅವುಗಳ ಕರ್ತವ್ಯವನ್ನು ನಿರ್ವಹಿಸುತ್ತದೆ, ಸಂವಿಧಾನದ ಎಲ್ಲಾ ತತ್ವಗಳನ್ನು ನಾವು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಗೌರವಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸಿ.ಜಗನಾಥ್, ಬಯಪ ನಿರ್ದೇಶಕ ಪ್ರಸನ್ನ ಕುಮಾರ್, ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷಕೆ.ಆರ್.ನಾಗೇಶ್, ಪ್ರಧಾನ ಕಾರ್ಯದರ್ಶಿ ನಾಗೇಗೌಡ, ವಿಜಯಪುರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ದಿನ್ನೂರು ವೆಂಕಟೇಶ್, ಅಣ್ಣೇಶ್ವರ ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರಶೇಖರ್, ಮುಖಂಡರುಗಳಾದ ರವಿಕುಮಾರ್, ರಾಮಚಂದ್ರಪ್ಪ, ಮುನಿರಾಜು, ರಾಧಾರೆಡ್ಡಿ,ಮಾಧವಿ ಕಾಂತರಾಜು, ದೊಡ್ಡತತ್ತಮಂಗಲ ರಮೇಶ್, ಶಶಿಕಲಾ, ಡೇವಿಡ್ ನಾರಾಯಣಸ್ವಾಮಿ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

0
633 views