logo

ಶಾಮನೂರು ಶಿವಶಂಕರಪ್ಪ ನಿಧನ: ನಾಳೆ ದಾವಣಗೆರೆಯಲ್ಲಿ ಶಾಲಾ–ಕಾಲೇಜುಗಳಿಗೆ ರಜೆ

ದಾವಣಗೆರೆ, ಡಿಸೆಂಬರ್ 14:
ಕಾಂಗ್ರೆಸ್ ಹಿರಿಯ ನಾಯಕ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಡಿಸೆಂಬರ್ 15ರಂದು ದಾವಣಗೆರೆ ನಗರದ ವ್ಯಾಪ್ತಿಯ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಗೌರವ ಸೂಚಕವಾಗಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ದಾವಣಗೆರೆ ನಗರದ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

ಘೋಷಿತ ರಜೆಯನ್ನು ಸರಿದೂಗಿಸುವ ಸಲುವಾಗಿ ಮುಂದಿನ ಶನಿವಾರ, ಅಂದರೆ ಡಿಸೆಂಬರ್ 27ರಂದು ಪೂರ್ಣ ದಿನ ಶಾಲೆಗಳನ್ನು ನಡೆಸುವಂತೆ ಸೂಚಿಸಲಾಗಿದೆ. ಈ ಆದೇಶವು ದಾವಣಗೆರೆ ನಗರ ವ್ಯಾಪ್ತಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

169
8519 views