logo

ಸಂಭ್ರಮದ ಗುಗ್ಗಳ ಸೇವೆ ಕಾರ್ಯಕ್ರಮ

ಡಿ.15-ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕ್ ಕೆ. ಬೇವಿನಹಳ್ಳಿ ಗ್ರಾಮದ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಬೆಳಿಗ್ಗೆ 9.00 ಗಂಟೆಯಿಂದ ಮಧ್ಯಾಹ್ನದವರೆಗೆ ಸಂಪ್ರದಾಯಬದ್ಧವಾಗಿ ಗುಗ್ಗಳ ಸೇವೆ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಅಂಗವಾಗಿ ವೀರಗಾಸೆ ಒಡಪುಗಳನ್ನು ಹೇಳುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಅನೇಕ ವಾದ್ಯಗಳ ಸಮ್ಮೇಳನದೊಂದಿಗೆ ಶ್ರೀ ರೇವಣ ಸಿದ್ದೇಶ್ವರ ಸ್ವಾಮಿ, ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ಬೀರಲಿಂಗೇಶ್ವರ ಸ್ವಾಮಿಗಳ ಉತ್ಸವ ಮೂರ್ತಿಗಳನ್ನು ಹೊರಡಿಸಲಾಯಿತು. ನಂತರ ಗಂಗಾ ಪೂಜೆ ನೆರವೇರಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಉತ್ಸವದೊಂದಿಗೆ ಸಂಚರಿಸಿ ಪುನಃ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಕರೆತಂದು ವಿಜೃಂಭಿಸಲಾಯಿತು. ಈ ಸಂದರ್ಭದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಇದೇ ದಿನ ರಾತ್ರಿ 11 ಗಂಟೆಯಿಂದ ಬೆಳಗಿನಜಾವ 4 ಗಂಟೆಯವರೆಗೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ರೇವಣಸಿದ್ದೇಶ್ವರ ಸ್ವಾಮಿಯ ಚರಿತ್ರೆ ಕುರಿತು ಒಡಪು ಹೇಳಲಾಗುವುದು. ನಂತರ ಶ್ರೀ ಸ್ವಾಮಿಗಳನ್ನು ಶ್ರೀ ಮಹೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕರೆತಂದು ವಿಜೃಂಭಿಸುವ ಕಾರ್ಯಕ್ರಮ ಜರುಗುವುದು.

210
12355 views