logo

ಜೈ ಭೀಮ್ ಕ್ರಾಂತಿ ಸೇನೆ ಚಿಕ್ಕನಾಯಕನಹಳ್ಳಿ ತಾಲೂಕು ಅಧ್ಯಕ್ಷರಾಗಿ ಕೆ.ವಿ. ನಾಗರಾಜ್ ಆಯ್ಕೆ

ಚಿಕ್ಕನಾಯಕನಹಳ್ಳಿ:
ಜೈ ಭೀಮ್ ಕ್ರಾಂತಿ ಸೇನೆಯ ರಾಜ್ಯಾಧ್ಯಕ್ಷರಾದ ಜಗದೀಶ್ ಎಸ್. ಅವರ ಆದೇಶದ ಮೇರೆಗೆ, ಚಿಕ್ಕನಾಯಕನಹಳ್ಳಿ ತಾಲೂಕು ಅಧ್ಯಕ್ಷರಾಗಿ ಕಾತ್ರಿಕೆಹಾಲ್ ನಿವಾಸಿ ಕೆ.ವಿ. ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಸಂಘಟನೆಯ ತತ್ವಗಳು ಹಾಗೂ ಉದ್ದೇಶಗಳನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಈ ನೇಮಕಾತಿ ಮಾಡಲಾಗಿದೆ. ನೂತನ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಕೆ.ವಿ. ನಾಗರಾಜ್ ಅವರಿಗೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ನೇಮಕಾತಿಯಿಂದ ತಾಲೂಕಿನ ಮಟ್ಟದಲ್ಲಿ ಜೈ ಭೀಮ್ ಕ್ರಾಂತಿ ಸೇನೆಯ ಚಟುವಟಿಕೆಗಳಿಗೆ ಮತ್ತಷ್ಟು ಚೈತನ್ಯ ಸಿಗಲಿದೆ ಎಂದು ತಿಳಿದುಬಂದಿದೆ.

7
1197 views