
ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಮಾನ್ಯ ಶಾಸಕರಾದ ಶ್ರೀ ಬಿ.ಪಿ. ಹರೀಶ್ ಅವರು ಹಸಿರು ನಿಶಾನೆ
ಪಲ್ಸ್ ಪೋಲಿಯೊ ಜಾಗೃತಿಗೆ ರಾಷ್ಟ್ರೀಯ ಜಾಥಾ ಕಾರ್ಯಕ್ರಮಕ್ಕೆ ಚಾಲನೆ
ಹರಿಹರ:
ನಗರದ ಗುರುಭವನದ ಆವರಣದಲ್ಲಿ ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೊ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಜಾಥಾ ಕಾರ್ಯಕ್ರಮಕ್ಕೆ ಮಾನ್ಯ ಶಾಸಕರಾದ ಶ್ರೀ ಬಿ.ಪಿ. ಹರೀಶ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೋಲಿಯೊ ನಿರ್ಮೂಲನೆಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳಿಗೆ ಸಾರ್ವಜನಿಕರ ಸಹಕಾರ ಅತ್ಯಂತ ಅವಶ್ಯಕವಾಗಿದ್ದು, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಪಲ್ಸ್ ಪೋಲಿಯೊ ಅಭಿಯಾನದಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಹರಿಹರ ತಹಶಿಲ್ದಾರರಾದ ಶ್ರೀ ಗುರುಬಸವರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಶ್ರೀ ಅಲ್ದಾಲ್ ಖಾದರ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ದುರ್ಗಪ್ಪ, CDPO ಅಧಿಕಾರಿ ಶ್ರೀಮತಿ ಪ್ರಿಯಾದರ್ಶನಿ ಸೇರಿದಂತೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪಲ್ಸ್ ಪೋಲಿಯೊ ಲಸಿಕೆಯ ಮಹತ್ವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.