logo

ನಿರಂಜನ ಜನ್ಮ ಶತಮಾನೋತ್ಸವದ ಅಂಗವಾಗಿ ಪ್ರಬಂಧ–ಭಾಷಣ ಸ್ಪರ್ಧೆ



ದಾವಣಗೆರೆ: 100 ನಿರಂಜನರ ಜನ್ಮ ಶತಮಾನೋತ್ಸವ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ನವಕರ್ನಾಟಕ ಪ್ರಕಾಶನದ ತಿಂಗಳ ಪತ್ರಿಕೆ ‘ಹೊಸತು’ ವತಿಯಿಂದ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗಾಗಿ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸ್ಪರ್ಧೆಯ ವಿಷಯವಾಗಿ “ನಿರಂಜನರ ಸಾಹಿತ್ಯ – ನನ್ನ ಓದು” ಅನ್ನು ಆಯ್ಕೆ ಮಾಡಲಾಗಿದೆ. ನಿರಂಜನರ ಸಾಹಿತ್ಯದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯಿರುವ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ/ವಿದ್ಯಾರ್ಥಿನಿಯರು ತಮ್ಮ ಹೆಸರನ್ನು hosathu@gmail.com ಗೆ ಇ–ಮೇಲ್ ಕಳುಹಿಸುವ ಮೂಲಕ ದಿನಾಂಕ 25–01–2026ರೊಳಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ಸ್ಪರ್ಧೆಯಲ್ಲಿ ವಿಜೇತರಾಗುವವರಿಗೆ ಆಕರ್ಷಕ ನಗದು ಬಹುಮಾನಗಳನ್ನು ನೀಡಲಾಗುವುದು. ಪ್ರಥಮ ಬಹುಮಾನ ರೂ. 5,000, ದ್ವಿತೀಯ ಬಹುಮಾನ ರೂ. 3,000 ಹಾಗೂ ತೃತೀಯ ಬಹುಮಾನ ರೂ. 2,000 ನಿಗದಿಪಡಿಸಲಾಗಿದೆ.

ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಿರಂಜನರ ಸಾಹಿತ್ಯ ಪರಂಪರೆಯನ್ನು ಅರಿತುಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

165
6023 views