ಅಪಘಾತ ಪ್ರಕರಣವನ್ನು ಕೊಲೆಯೆಂದು ಒಪ್ಪಿಕೊಳ್ಳಲು ಒತ್ತಾಯ
ಕೆಂಭಾವಿ ಪೊಲೀಸ್ ಠಾಣೆ ಪಿಎಸ್ಐ ಅಮೋಜಿ ಕಾಂಬಳೆ ಮೆಹಬೂಬಲಿ ಎಂಬ ವ್ಯಕ್ತಿಯನ್ನು ವಿಚಾರಣೆಗೆಂದು ಕರೆದು ಮರಣಾಂತಿಕ ಹಲ್ಲೆ ನಡೆಸಿ ದೌರ್ಜನ್ಯ ಎಸಗಲಾಗಿದೆ ಎಂದು ಆತನ ಕುಟುಂಬದವರು ಆರೋಪಿಸಿದ್ದಾರೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಸಾಹಿಲ್ ಎಂಬ ವ್ಯಕ್ತಿ ಮೃತಪಟ್ಟಿದ್ದು ಇದೊಂದು ವ್ಯವಸ್ಥಿತ ಕೊಲೆ ಎಂದು ಮೆಹಬೂಬಲಿಯನ್ನು ಒಪ್ಪಿಕೊಳ್ಳಲು ಒತ್ತಾಯಿಸಿ ಹಿಂಸಿಸುತ್ತಿದ್ದಾರೆ ಎನ್ನಲಾಗಿದೆ.