ಗ್ರಾಮ ಪಂಚಾಯಿತಿಗಳು ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆ
ಬೀದರ್ ಜಿಲ್ಲೆಯ ಮನ್ನಾ ಏಖೆಳ್ಳಿ ಹುಲ್ಸೂರ್, ಕಂಠಾಣಾ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೇರಿಸುವ ಕುರಿತು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಘನ ಅಧ್ಯಕ್ಷತೆಯಲ್ಲಿ ಜರುಗಿದ ಸಂಪುಟ ಸಭೆಯಲ್ಲಿ ಅಂತಿಮಗೊಳಿಸಿ ಅನುಮೋದನೆ ನೀಡಲಾಗಿದೆ ಎಂದು ಕರ್ನಾಟಕ ಪೌರಾಡಳಿತ ಸಚಿವ ರಹೀಮ್ ಖಾನ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿ ನಮ್ಮ ಸರಕಾರ ಪ್ರಗತಿ ಮತ್ತು ಕಲ್ಯಾಣಕ್ಕೆ ಬದ್ಧ ವಾಗಿದೆ ಎಂದರು.