ಸ.ಪ್ರ. ದ. ಮಹಿಳಾ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಇಂಗ್ಲೀಷ್ ಪಠ್ಯಕ್ರಮದ(ಎಸ್.ಇ.ಪಿ) ಒಂದು ದಿನದ ಕಾರ್ಯಗಾರ.
ಸ.ಪ್ರ. ದ. ಮಹಿಳಾ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಇಂಗ್ಲೀಷ್ ಪಠ್ಯಕ್ರಮದ(ಎಸ್.ಇ.ಪಿ) ಒಂದು ದಿನದ ಕಾರ್ಯಗಾರ.
ಫೆ. 27, ದಾವಣಗೆರೆ:
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದಾವಣಗೆರೆ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಸದರಿ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಲಿದ್ದಾರೆ. ಕಾರ್ಯಗಾರವು ರಾಜ್ಯ ಶಿಕ್ಷಣ ನೀತಿಯ ಅಡಿಯಲ್ಲಿ ಇಂಗ್ಲೀಷ್ ಪಠ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ಮಾರ್ಗದರ್ಶಕವಾಗಲಿದೆ.
ಈ ಕುರಿತು ಆಯೋಜಕರಾದ ಡಾ. ಭೀಮಪ್ಪ ಎಂ.ಪಿ. ತಿಳಿಸಿದ್ದಾರೆ.