logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಆರ್.ಎಮ್.ನಾಟೆಕಾರ್ ವಿಭಾಗೀಯ ಉಪಾಧ್ಯಕ್ಷರಾಗಿ ನೇಮಕ

ಬೆಂಗಳೂರು : ಕರ್ನಾಟಕ ಎಸ್.ಸಿ./ಎಸ್.ಟಿ. ನೌಕರರ ಸಮನ್ವಯ ಸಮಿತಿಯ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಆರ್. ಎಮ್. ನಾಟೆಕಾರ್ ಅವರನ್ನು ಸಮಿತಿಯ ವಿಭಾಗೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಡಾ. ಸಿದ್ದಲಿಂಗಯ್ಯ ರವರ ಸ್ಮಾರಕ ಭವನದಲ್ಲಿ ನಡೆದ ಸಮಾರಂಭದಲ್ಲಿ ಈ ಮಹತ್ವದ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು. ರಾಜ್ಯ ಘಟಕದ ಅಧ್ಯಕ್ಷರಾದ ಡಿ. ಶಿವಶಂಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ವಿಜಯ್ ಕುಮಾರ್, ಆರ್. ಮೋಹನ್, ಹಿರಿಯ ಉಪಾಧ್ಯಕ್ಷರಾದ ಕೆಂಪಸಿದ್ದಯ್ಯ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಾಲು ಮತ್ತು ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಅಶ್ವಿನಿ ಲಕ್ಕಮ್ಮ ಅವರ ಉಪಸ್ಥಿತಿಯಲ್ಲಿ ಈ ನೇಮಕಾತಿ ಆದೇಶವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಎಸ್.ಸಿ./ಎಸ್.ಟಿ. ನೌಕರರ ಸಮನ್ವಯ ಸಮಿತಿಯ ಹಿರಿಯ ಉಪಾಧ್ಯಕ್ಷರಾದ ಚಂದ್ರಕಾಂತ ಸಂಗೊಳಗಿ, ಕೋಶಾಧ್ಯಕ್ಷರಾದ ಶರಣಬಸಪ್ಪ ಮತ್ತು ದಲಿತ ಮುಖಂಡರಾದ ಶ್ರೀಕಾಂತ್ ಉಪಸ್ಥಿತರಿದ್ದು ಹರ್ಷ ವ್ಯಕ್ತಪಡಿಸಿದರು. ನೂತನ ವಿಭಾಗೀಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಆರ್. ಎಮ್. ನಾಟೆಕಾರ್ ಅವರಿಗೆ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ನೌಕರರು ಅಭಿನಂದನೆ ಸಲ್ಲಿಸಿದ್ದಾರೆ.

8
822 views

Comment