logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಆಚರಣೆ

ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಆಚರಣೆ

ದಾವಣಗೆರೆ, ಏಪ್ರಿಲ್ 14: ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯ ಎಂ.ಬಿ.ಎ. ಸಭಾಂಗಣದಲ್ಲಿ 14-04-2026ರ ಮಂಗಳವಾರ ಬೆಳಗ್ಗೆ 11:00 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮಾನ್ಯ ಕುಲಪತಿಗಳಾದ ಪ್ರೊ. ಬಿ.ಡಿ. ಕುಂಬಾರ ಅವರು ಅಧ್ಯಕ್ಷತೆ ವಹಿಸಿದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು ಡಾ. ಅಂಬೇಡ್ಕರ್ ಅವರ ಸಂವಿಧಾನ ರಚನೆ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಪರವಾದ ಹೋರಾಟಗಳನ್ನು ಸ್ಮರಿಸಿದರು. ಅಂಬೇಡ್ಕರ್ ಅವರ ಚಿಂತನೆಗಳು ಯುವಪೀಳಿಗೆಗೆ ಸದಾ ಮಾರ್ಗದರ್ಶಕವಾಗಿದ್ದು, ಶಿಕ್ಷಣದ ಮೂಲಕ ಸಮಾಜ ಪರಿವರ್ತನೆ ಸಾಧ್ಯವೆಂದು ಹೇಳಿದರು. ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನಮಾನ ಕಲ್ಪಿಸಿದ ಅಂಬೇಡ್ಕರ್ ಅವರ ದೃಷ್ಟಿಕೋನವನ್ನು ಉಲ್ಲೇಖಿಸಿ, ಸಮಾಜದಲ್ಲಿನ ಹೊಂದಾಣಿಕೆ ಸಮಸ್ಯೆಗಳನ್ನು ನಿವಾರಿಸಲು ಪ್ರತಿಯೊಬ್ಬರೂ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದ ಭೌಗೋಳ ಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಅರವಿಂದ ಎ. ಮೂಲಿಮನಿ ಅವರು ಭಾಗವಹಿಸಿ, ಡಾ. ಅಂಬೇಡ್ಕರ್ ಅವರ ಜೀವನ ಸಂದೇಶ, ಸಾಮಾಜಿಕ ಸಮಾನತೆಗಾಗಿ ನಡೆಸಿದ ಹೋರಾಟ ಮತ್ತು ಸಂವಿಧಾನದ ಮೌಲ್ಯಗಳ ಕುರಿತು ಉಪನ್ಯಾಸ ನೀಡಿದರು. ಅಸ್ಪೃಶ್ಯತೆ ನಿರ್ಮೂಲನೆ, ಸಮಾನತೆ, ಶಿಕ್ಷಣದ ಮಹತ್ವ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಗೌರವ ಉಪಸ್ಥಿತಿಯಾಗಿ ಶ್ರೀ ಎಸ್.ಬಿ. ಗಂಟಿ, ಕೆಎಎಸ್ (ಸೂಪರ್ ಟೈಂ ಸೈಲ್), ಮಾನ್ಯ ಕುಲಸಚಿವರು (ಆಡಳಿತ) ಡಾ. ರಮೇಶ್ ಸಿ.ಕೆ., ಮಾನ್ಯ ಕುಲಸಚಿವರು (ಪರೀಕ್ಷಾಂಗ) ಡಾ. ಶಶಿಧರ್ ಆರ್., ಮಾನ್ಯ ಹಣಕಾಸು ಅಧಿಕಾರಿಗಳು ಹಾಗೂ ಡಾ. ನಿರಂಜನ್ ಎಂ.ಹೆಚ್., ಸಂಚಾಲಕರು, ಪ.ಜಾ. ಮತ್ತು ಪ.ಪಂ. ವಿದ್ಯಾರ್ಥಿ ಅಭಿವೃದ್ಧಿ ಘಟಕ ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಎನ್‌ಎಸ್‌ಎಸ್ ಅಧಿಕಾರಿಗಳು ಮತ್ತು ಶಿಬಿರಾರ್ಥಿಗಳು, ಏಜೆನ್ಸಿ ನೌಕರರು, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.

ಡಾ. ಅಂಬೇಡ್ಕರ್ ಅವರ ಆದರ್ಶಗಳು ಮತ್ತು ಚಿಂತನೆಗಳನ್ನು ಸ್ಮರಿಸುವುದರೊಂದಿಗೆ ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಬಲಪಡಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮವು ಸಮಾಪ್ತಿಯಾಯಿತು.

19
1183 views

Comment