ಶಿವಾಪುರದಲ್ಲಿ ನವೋದಯ ವಿದ್ಯಾನಿಕೇತನ ಶಾಲೆಯ ಎಸ್.ಎಸ್.ಎಲ್.ಸಿ. ಶೇ.100 ಫಲಿತಾಂಶ
ಶಿವಾಪುರ: ದೋಡ್ಡಬಳ್ಳಾಪುರ ತಾಲ್ಲೂಕಿನ ಶಿವಾಪುರದಲ್ಲಿರುವ ನವೋದಯ ವಿದ್ಯಾನಿಕೇತನ ಶಾಲೆಯು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿ ಗಮನ ಸೆಳೆದಿದೆ.
ಶಾಲೆಯ ವಿದ್ಯಾರ್ಥಿನಿ ಹಸಿನಿ.ಆರ್ 97% ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದರೆ, ಯಶಸ್.ಎಂ 96%, ಜಗನ್.ಎಂ 95%, ಚೈತನ್ಯ 93%, ನಿಹಾರಿಕಾ.ಎನ್.ಸಿ 92%, ಮೋನಿಕಾ.ಕೆ.ಎಲ್ 90% ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಇತರ ವಿದ್ಯಾರ್ಥಿಗಳೂ ಉತ್ತಮ ಅಂಕಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಮತ್ತು ಪೋಷಕರು ಸಂತಸ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಪರಿಶ್ರಮ ಹಾಗೂ ಶಿಕ್ಷಕರ ಮಾರ್ಗದರ್ಶನವೇ ಯಶಸ್ಸಿನ ಮುಖ್ಯ ಕಾರಣವೆಂದು ತಿಳಿಸಿದ್ದಾರೆ.
ಶಾಲೆಯ ಕಾರ್ಯದರ್ಶಿ ಭವ್ಯಾ ಮ್ಯಾಡಮ್ ಅವರು ಎಲ್ಲಾ ಸಾಧಕರಿಗೆ ಹಾರ್ದಿಕ ಅಭಿನಂದನೆಗಳನ್ನು ತಿಳಿಸಿ, ವಿದ್ಯಾರ್ಥಿಗಳು ಇದೇ ರೀತಿ ಮುಂದಿನ ದಿನಗಳಲ್ಲಿಯೂ ಉತ್ತಮ ಸಾಧನೆ ಸಾಧಿಸಲಿ ಎಂದು ಹಾರೈಸಿದರು.
ಇದೇವೇಳೆ, 2026-27ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಆಸಕ್ತ ಪೋಷಕರು ತಮ್ಮ ಮಕ್ಕಳಿಗೆ ದಾಖಲಾತಿ ಮಾಡಿಸಿಕೊಳ್ಳಲು ಶಾಲೆಯನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ.