logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಪಿಯುಸಿಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ : ವೈಷ್ಣವಿ ದೇಸಾಯಿ ಸನ್ಮಾನ

ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದ ವಿದ್ಯಾರ್ಥಿನಿ ವೈಷ್ಣವಿ ಹನಮಂತರಾವ್ ದೇಸಾಯಿ ಅವರು ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಅಪೂರ್ವ ಸಾಧನೆ ಮಾಡಿದ್ದಾರೆ. ಅವರ ಈ ಸಾಧನೆಯನ್ನು ಗುರುತಿಸಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಿಂಗಪ್ಪ ಸಜ್ಜನ ಅವರು ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿನಿಯೊಬ್ಬಳು ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಎಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಹೇಳಿದರು. ವಿದ್ಯಾರ್ಥಿಗಳು ಗುರಿ ಹಾಗೂ ಪರಿಶ್ರಮದೊಂದಿಗೆ ಮುಂದುವರಿದರೆ ಯಶಸ್ಸು ಖಚಿತ ಎಂದು ತಿಳಿಸಿದರು.

ಪ್ರಿಯದರ್ಶಿನಿ ಮೇಡಂ ಅವರು ಮಾತನಾಡಿ, ವೈಷ್ಣವಿ ಅವರ ಶಿಸ್ತು, ನಿರಂತರ ಅಭ್ಯಾಸ ಮತ್ತು ವಿದ್ಯಾಭ್ಯಾಸದ ಮೇಲಿನ ಆಸಕ್ತಿ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಲಿ ಎಂದು ಹಾರೈಸಿದರು.

ಆದಪ್ಪ ಸಾಲವಾಡಗಿ ಸರ್ ಅವರು ಮಾತನಾಡಿ, ಶಿಕ್ಷಕರು ಹಾಗೂ ಪೋಷಕರ ಮಾರ್ಗದರ್ಶನ ವಿದ್ಯಾರ್ಥಿಗಳ ಸಾಧನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಹನಮಂತರಾವ್ ದೇಸಾಯಿ ಅವರು ಮಾತನಾಡಿ, ಮಗಳ ಸಾಧನೆಗೆ ಸಹಕಾರ ನೀಡಿದ ಶಿಕ್ಷಕರು, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಈರನಗೌಡ ಟೆಂಗುಂಟಿ, ಮಹೇಬೂಬು ಸಾಬ್ ನೆಡುಲಮನಿ, ಕಲ್ಲಯ್ಯ ಸ್ವಾಮಿ ಸರಗಣಾಚಾರಿ, ನಿಂಗಪ್ಪ ಸಜ್ಜನ ಹಾಗೂ ಉಮೇಶ್ ಮಡಿವಾಳ

ಮುತ್ತಣ್ಣ ಹೊಸಲುಕೊಪ್ಪ

ಸೇರಿದಂತೆ ಹಲವರು ಉಪಸ್ಥಿತರಿದ್ದು ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದರು.

6
379 views

Comment