logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಗ್ರಾಮೀಣ ಭಾಗದ ಬಡ, ನಿವೇಶನ ರಹಿತ ಕುಟುಂಬಗಳಿಗೆ ಸರ್ಕಾರದ ಆಶ್ರಯ ಯೋಜನೆಯ ಸೌಲಭ್ಯ ತಲುಪಿಸಬೇಕು

ದೇವನಹಳ್ಳಿ ಸುದ್ದಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ ಅನುರಾಧ ಕೆ ಎನ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್ ರವರ ಉಪಸ್ಥಿತಿಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ಆಶ್ರಯ ಯೋಜನೆಯಡಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಪ್ರಗತಿ ಪರಿಶೀಲನಾ ಸಭೆಯನ್ನು ಅಧಿಕಾರಗಳೊಂದಿಗೆ ಚರ್ಚಿಸಿದರು.

ಗ್ರಾಮೀಣ ಭಾಗದ ಬಡ, ನಿವೇಶನ ರಹಿತ ಕುಟುಂಬಗಳಿಗೆ ಸರ್ಕಾರದ ಆಶ್ರಯ ಯೋಜನೆಯ ಸೌಲಭ್ಯ ತಲುಪಿಸಬೇಕು ಎಂದು ಸೂಚಿಸಲಾಯಿತು.

ನಿವೇಶನ ಹಂಚಿಕೆಗೆ ಮಂಜೂರಾದ ಸ್ಥಳ ಪರಿಶೀಲನೆ ಮಾದರಿಯನ್ನು ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದು. ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬ, ತಾಂತ್ರಿಕ ಅಡೆತಡೆ ಆಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಯಿತು.

ಸಭೆಯಲ್ಲಿ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿ, ಪಿಡಿಓ, ಕಂದಾಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

1
0 views

Comment