ಜಿಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಬೀದರ: ಬೀದರ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಭೆಯು ಶನಿವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು (ಕನ್ಯಾ)ಯಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದ ಬಳಿಕ ಜಿಲ್ಲೆಯ ಪ್ರಾಂಶುಪಾಲರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸಂಘದ ಅಧ್ಯಕ್ಷರಾಗಿ ಓಂಪ್ರಕಾಶ ಧಡ್ಡೆ ಆಯ್ಕೆಯಾಗಿದ್ದು, ಗೌರವ ಅಧ್ಯಕ್ಷರಾಗಿ ಡಾ. ಚಂದ್ರಕಾAತ ಗಂಗಶೆಟ್ಟಿ ನೇಮಕಗೊಂಡಿದ್ದಾರೆ.
ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಲದ್ದೆ, ಪ್ರತಿಭಾ ಹಾಗೂ ರಮೇಶ ಪಾಟೀಲ ಆಯ್ಕೆಯಾಗಿದ್ದಾರೆ. ಕೋಶಾಧ್ಯಕ್ಷರಾಗಿ ಭಗವಾನ ಬಿರಾದರ, ಕಾರ್ಯಾಧ್ಯಕ್ಷರಾಗಿ ವಿಜಯಕುಮಾರ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜ ಬಿರಾದರ ಹಾಗೂ ಸಹ ಕಾರ್ಯದರ್ಶಿಯಾಗಿ ಪ್ರೇಮನಾಥ ಪಾಂಚಾಳ ನೇಮಕಗೊಂಡಿದ್ದಾರೆ.
ರಾಜ್ಯ ಪ್ರತಿನಿಧಿಯಾಗಿ ಮಾರುತಿರೆಡ್ಡಿ ಹಾಗೂ ಮಹಿಳಾ ಪ್ರತಿನಿಧಿಯಾಗಿ ಶಾಂತಲಾ ಆಯ್ಕೆಯಾಗಿದ್ದಾರೆ.
ಕಾರ್ಯಕಾರಿಣಿ ಮಂಡಳಿ ಸದಸ್ಯರಾಗಿ ಸುಖದೇವ ಬಿರಾದರ, ರಾಜೇಂದ್ರ ಚವ್ಹಾಣ, ಭಾಗ್ಯಶ್ರೀ, ಮಲ್ಲಪ್ಪ ಅಮಣಿ, ಅಶೋಕ ರೆಡ್ಡಿ (ಬಸವಕಲ್ಯಾಣ) ಹಾಗೂ ವಿಜಯಕುಮಾರ ಠಾಣಾಕೂಶನೂರ ಅವರನ್ನು ಆಯ್ಕೆ ಮಾಡಲಾಗಿದೆ.
ನೂತನ ಪದಾಧಿಕಾರಿಗಳು ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ಗುಣಮಟ್ಟ ವೃದ್ಧಿ, ಆಡಳಿತಾತ್ಮಕ ಸಮಸ್ಯೆಗಳ ಪರಿಹಾರ ಹಾಗೂ ಶಿಕ್ಷಕ-ವಿದ್ಯಾರ್ಥಿಗಳ ಹಿತಾಸಕ್ತಿಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಸಂಘದ ಪ್ರಧಾನ ಕಾರ್ಯದರ್ಶಿ ಶಿವರಾಜ ಬಿರಾದರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.