ಬೀದರ ಜಿಲ್ಲಾ ಪೊಲೀಸ್, ಭಾಲ್ಕಿ ನಗರ ಪೊಲೀಸರಿಂದ ಸಿ.ಇ.ಐ.ಆರ್ ಪೋರ್ಟಲ್ ಸಹಾಯದಿಂದ ಮೊಬೈಲ್ ಪತ್ತೆ
ಮಾನ್ಯ ಪ್ರದೀಪ್ ಗುಂಟಿ, ಐ.ಪಿ.ಎಸ್. ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಬೀದರ ಜಿಲ್ಲೆಯ ಭಾಲ್ಕಿ ನಗರ ಪೊಲೀಸ್ ಠಾಣೆಯ ಪಿ.ಐ ಶ್ರೀ ಅಮರೇಶ ರವರ ನೇತೃತ್ವದಲ್ಲಿ ಠಾಣೆಯ ಅಧಿಕಾರಿ, ಸಿಬ್ಬಂದಿ ರವರ ಪ್ರಯತ್ನದಿಂದ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿರುವ ಮೊಬೈಲ್ಗಳನ್ನು CEIR_ಪೋರ್ಟಲ್ ಸಹಾಯದಿಂದ ಪತ್ತೆ ಹಚ್ಚಿ ಮೊಬೈಲ್ ಫೋನ್ ವಾರಸುದಾರರಿಗೆ ಮೊಬೈಲ್ ಗಳನ್ನು ಹಸ್ತಾಂತರಿಸಿರುತ್ತಾರೆ.
ಮೊಬೈಲ್ ಪತ್ತೆ ಹಚ್ಚುವಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.