logo

ಪಾನಗಲ್ ಮಂಡಲದಲ್ಲಿ ಪೂರ್ವಭಾವಿ ಸಭೆ

ತೆಲಂಗಾಣ/ ಕೊಲ್ಲಾಪುರ, ನ.20:
ತೆಲಂಗಾಣ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಶಾಸಕರ ನೇತೃತ್ವದ ತಂಡ ಕೊಲ್ಲಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ, ಮಾಜಿ ಸಚಿವ ಜೂಪಲ್ಲಿ ಕೃಷ್ಣಾರಾವ್ ಅವರ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಪ್ರಚಾರದ ಅಂಗವಾಗಿ ಕೊಲ್ಲಾಪುರ ಕ್ಷೇತ್ರದ ಪಾನಗಲ್ ಮಂಡಲದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸೋಮವಾರ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಇತ್ತೀಚೆಗೆ ಬಿಆರೆಸ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಮಂಗಳವಾರ ಪಾನಗಲ್ ಮಂಡಲದಲ್ಲಿ ಶಾಸಕ ನಾರಾ ಭರತ್ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿ ಜೂಪಲ್ಲಿ ಅವರ ಪರ ಮತ ಯಾಚಿಸಲಿದ್ದು, ಪ್ರಚಾರಕ್ಕೆ ಸಂಬಂಧಿಸಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಬಳ್ಳಾರಿ ಮಹಾನಗರ ಪಾಲಿಕೆಯ 35ನೇ ವಾರ್ಡ್ ಸದಸ್ಯ ವಿ.ಶ್ರೀನಿವಾಸುಲು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಚಾನಾಳ್ ಶೇಖರ್, ಕಾಂಗ್ರೆಸ್ ಮುಖಂಡ ಬಿಆರೆಲ್ ಶ್ರೀನಿವಾಸ್ ನೇತೃತ್ವದಲ್ಲಿ ಸಭೆ ನಡೆಯಿತು.

ಈ ವೇಳೆ ಸ್ಥಳೀಯರಾದ ಮಾಜಿ ಜಿ.ಪಂ. ಸದಸ್ಯ ರವಿ, ಮಾಜಿ ಮಂ.ಪಂ. ಸದಸ್ಯ ವೆಂಕಟೇಶ್ ನಾಯ್ಡು, ಮಾಜಿ ಸರಪಂಚ್ ಭಾಸ್ಕರ್ ಸೇರಿದಂತೆ ಹಲವರು ಹಾಜರಿದ್ದರು.

0
0 views