logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಶಿಫಾರಸು ಮಾಡಿದ ಪಶ್ಚಿಮ ಬಂಗಾಳ ಸಿ.ಎಮ್. ಮಮತಾ ಬ್ಯಾನರ್ಜಿ.

ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಶಿಫಾರಸು ಮಾಡಿದ ಪಶ್ಚಿಮ ಬಂಗಾಳ ಸಿ.ಎಮ್. ಮಮತಾ ಬ್ಯಾನರ್ಜಿ.
2024 ರ ಲೋಕಾಸಭಾ ಚುನಾವಣೆಗೆ ಕಾಂಗ್ರೇಸ್ ಈಗಿನಿಂದಲೇ ತಯಾರಿ ಶುರು ಮಾಡಿದೆ. ಅದಕ್ಕಾಗಿ ಇಂದು ದೆಹಲಿಯ ಕಾಂಗ್ರೇಸ್ ಕೇಂದ್ರ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ.
ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಐ.ಎನ್.ಡಿ.ಐ.ಎ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಭಾರತ ಮೈತ್ರಿಕೂಟದ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನು ಮಮತಾ ಬ್ಯಾನರ್ಜಿ ಅವರ ಮಾತಿಗೆ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಬೆಂಬಲಿಸಿದ್ದಾರೆ ಎಂದು ಹೇಳಾಲಗುತ್ತಿದೆ. ಸಂಸದರ ಅಮಾನತು ವಿಚಾರ ಕೂಡ ಸಭೆಯಲ್ಲಿ ಪ್ರಸ್ತಾಪವಾಗಿದೆ. ಈ ವಿಚಾರವಾಗಿ ಪ್ರತಿಪಕ್ಷಗಳು ಒಗ್ಗಟ್ಟಾಗಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಲ್ಲಿ ಇವಿಎಮ್ ಬಗ್ಗೆಯು ಚರ್ಚಿಸಲಾಗಿದೆ.
ಇದರ ವಿಚಾರವಾಗಿ ಕಾಂಗ್ರೇಸ್ ಹಿರಿಯ ನಾಯಕಿ ಸೋನಿಯ ಗಾಂಧಿ, ಹಾಗೂ ರಾಹುಲ್ ಗಾಂಧಿಯವರು ಏನು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

121
3844 views

Comment