ಹಲ್ಲೆ ಪ್ರಕರಣ: ಗುಬ್ಬಿ ಶಾಸಕ ಎಸ್‌ಆರ್ ಶ್ರೀನಿವಾಸ್ ವಿರುದ್ಧ 48 ಗಂಟೆಗಳ ಬಳಿಕ ಎಫ್‌ಐಆರ್
ತುಮಕೂರು: ಗುಬ್ಬಿ ಶಾಸಕ ಎಸ್‌ಆರ್ ಶ್ರೀನಿವಾಸ್ ಅವರ ವಿರುದ್ದ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ, ಜಾಗತಿಕ ಲಿಂಗಾಯತ ವೇದಿಕೆ ರಾಜ್ಯ ಸಂಚಾಲಕ ರಾಯಸಂದ್ರ ರವಿಕುಮಾರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 48 ಗಂಟೆಗಳ ಬಳಿಕ ಎಫ್‌ಐಆರ್ ದಾಖಲಾಗಿದೆ.