logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಣೆ ಮಾಡಿ ಹಾಗೂ ಬಸಗಳ ಸಂಖ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ. ಎ ಬಿ ವಿ ಪಿ ಸಿಂದಗಿ

ಸಿಂದಗಿ : ನಗರದಲ್ಲಿ ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಿಸುವಂತೆ ಹಾಗೂ ಬಸ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ಕಾರ್ಯಕರ್ತರು ನಗರದ ಬಸವೇಶ್ವರ ಸರ್ಕಲ್ ಹತ್ತಿರ ಮಾನವನ ಸರಪಳಿ ನಿರ್ಮಾಣ ಮಾಡಿ ಬೃಹತ್ ಪ್ರತಿಭಟನೆ ಮಾಡಿದರು.
ಕರ್ನಾಟಕ ರಾಜ್ಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪಡೆಯಲು ಅತೀ ಹೆಚ್ಚು ನಗರ ಪ್ರದೇಶಗಳ ಶಾಲಾ ಕಾಲೇಜುಗಳಿಗೆ ಬರುತ್ತಾರೆ. ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ಅನ್ನು ವಿತರಣೆ ಮಾಡದೇ ಇರುವ ಕಾರಣ ಪ್ರತಿದಿನ ನೂರಾರು ರೂಪಾಯಿಗಳನ್ನು ಖರ್ಚು ಮಾಡಿಕೊಂಡು ಬಡ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುವುದು ಕಷ್ಟದ ಸಂಗತಿ ಆಗಿದೆ. ಸರ್ಕಾರ ಶಾಲಾ ಕಾಲೇಜುಗಳು ಪ್ರಾರಂಭವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅನ್ನು ಸಕಾಲದಲ್ಲಿ ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಸಿಬ್ಬಂದಿಗಳನ್ನು ಬಳಸಿಕೊಂಡು ಬಸ್ ಪಾಸ್ ಒದಗಿಸುವ ಅವಶ್ಯಕತೆ ಇದೆ. ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿದ ನಂತರ ವಾರಗಳ ಕಾಲ ವಿದ್ಯಾರ್ಥಿಗಳು ಬಸ್ ಪಾಸ್ ಅನ್ನು ಪಡೆಯಲು ಕಾಯುವ ಸ್ಥಿತಿ ರಾಜ್ಯದಲ್ಲಿ ಇದೆ. ಇದರಿಂದ ಬಡ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬಸ್ ಪಾಸ್ ಸಿಗುವರೆಗೂ ಬರದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಬಹಳಷ್ಟು ವ್ಯತ್ಯಾಸವಿದ್ದು, ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅನ್ನು ವಿತರಿಸುವಂತೆ ಎಬಿವಿಪಿ ಆಗ್ರಹಿಸುತ್ತದೆ.
ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿರುವುದ್ದರಿಂದ ಮಹಿಳೆಯರು ಹೆಚ್ಚು ಓಡಾಡುತ್ತಿರುವುದ್ದರಿಂದ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಸ್ ಗಳಲ್ಲಿ ಓಡಾಟ ಮಾಡಲು ಬಹಳ ಕಷ್ಟವಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಬಸ್ಸಿನ ಬಾಗಿಲಲ್ಲಿ ನಿಂತು ಅಪಾಯದ ಪ್ರಯಾಣವನ್ನು ಮಾಡುವುದು ಕಂಡು ಬರುತ್ತಿದೆ. ಸರಕಾರ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ನಿರ್ಧಾರ ಮಾಡಬೇಕು, ಯಾವ ಹಳ್ಳಿಗಳಿಗೆ ಬಸ್ ಗಳ ಕೊರತೆ ಇದೆ ಆ ಹಳ್ಳಿಗಳಿಗೆ ಸಮರ್ಪಕವಾದ ಬಸ್ ಗಳ. ವ್ಯವಸ್ಥೆಯನ್ನು ಶಾಲಾ-ಕಾಲೇಜುಗಳ ಸಮಯಕ್ಕೆ ಒದಗಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಿಂದಗಿ ವತಿಯಿಂದ ರಾಜ್ಯ ಸರ್ಕಾರಕ್ಕೆ ತಹಸೀಲ್ದಾರ್ ಮುಖಾಂತರ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ತಾಲೂಕ ಸಂಚಾಲಕ ಭಾಗಣ್ಣ ಭೀಮನಳ್ಳಿ, ವಿಶಾಲ ನಾಯ್ಕೊಡಿ, ಪ್ರಕಾಶ ಅಗಸರ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

229
10750 views

Comment