logo

ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಆಲಮೇಲ: ರಾಜ್ಯ ಕಾಂಗ್ರೆಸ್ ಸರ್ಕಾರದ ವಾಲ್ಮೀಕಿ ನಿಗಮದ ಅವ್ಯವಹಾರ ಮತ್ತು ಬೆಲೆ ಏರಿಕೆ ಖಂಡಿಸಿ ಸೋಮವಾರ ತಾಲೂಕಿನ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಶಾಸಕ ರಮೇಶ ಬೂಸನೂರ ಮಾತನಾಡಿ, ವಾಲ್ಮೀಕಿ ನಿಗಮದಲ್ಲಿನ 175 ಕೋಟಿ ಅನುದಾನ ತೆಲಂಗಾಣದ ಚುನಾವಣೆಗೆ ಬಳಕೆ ಮಾಡಿಕೊಂಡು ಭ್ರಷ್ಟಾಚಾರ ಮಾಡಿದೆ. ಇದರಿಂದ ಮನನೊಂದ ಅಧಿಕಾರಿ ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ. ಹೊತ್ತು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಸಾವಿಗೆ ನ್ಯಾಯ ಒದಗಿಸಬೇಕಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಫಲಾನುಭವಿಗಳಿಗೆ ತಲುಪಲುಸಾಧ್ಯವಾಗಿಲ್ಲ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯದ ಖಜಾನೆ ಲೋಟಿ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲದ ಸ್ಥಿತಿಗೆ ಬಂದಿರುವುದು ಕಾಂಗ್ರೆಸ್ ಸರ್ಕಾರದ ಸಾಧನೆ ಎಂದರು.
ಪಟ್ಟಣದ ಮೇನ್ ಬಜಾರದಿಂದ ಬಸ್ ನಿಲ್ದಾಣದವರೆಗೂ ಬ್ರಹತ್ ಪ್ರತಿಭಟನೆ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಗೋಷಣೆ ಕೂಗುತ್ತ ಮೆರವಣಿಗೆ ಮಾಡಿದರು. ನಂತರ ಅಂಬೇಡ್ಕರ ವೃತ್ತದ ಬಳಿ ಮಾನವ ಸರ್ಪಳಿ ನಿರ್ಮಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟಿಸಿ ತಹಶೀಲ್ದಾರ್ ಸುರೇಶ ಚಾವಲರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಮಂಡಲ ಬಿಜೆಪಿ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಶಿವಾನಂದ ಮಾರ್ಸನಳ್ಳಿ, ಹರಿಶ ಎಂಟಮಾನ, ಈರಣ್ಣ ರಾವೂರ ಮಾತನಾಡಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಿ.ಎಚ್. ಬಿರಾದಾರ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೋಗಾರ, ಶ್ರೀಮಂತ ನಾಗೂರ, ಗುಂಡು ಮೆಲಿನಮನಿ, ಪಪಂ ಸದಸ್ಯ ಚಂದ್ರಶೇಖರ ಹಳೆಮನಿ, ಮುಖಂಡರಾದ ಶ್ರೀಶೈಲ ಭೋವಿ, ಅಪ್ಪು ಶೆಟ್ಟಿ, ಅಲೋಕ ಬಡದಾಳ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

17
4502 views