ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.
ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.
ಅತಿವೃಷ್ಟಿಯಿಂದಾಗಿ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿ, ಬಳಿಕ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.
ನಂತರ ಕಾಳಜಿ ಕೇಂದ್ರಕ್ಕೆ ಭೇಟಿನೀಡಿ ಪರಿಶೀಲನೆ ನಡೆಸುವ ವೇಳೆ ಸಂತ್ರಸ್ತರಿಗೆ ಊಟೋಪಚಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರೂ ಆದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.