ಈ ದೃಶ ನೋಡಿದರೆ ಎದೆ ಝಾಲ್ ಅನಿಸುವದಂತೂ ಗ್ಯಾರಂಟಿ..
ಈ ದೃಶ ನೋಡಿದರೆ ಎದೆ ಝಾಲ್ ಅನಿಸುವದಂತೂ ಗ್ಯಾರಂಟಿ..
ಬೆಳಗಾವಿ, ಆಗಸ್ಟ್, 06: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಮಳೆರಾಯನ ಆರ್ಭಟ ತಗ್ಗಿದ್ದು, ಇನ್ನು ಕೆಲವು ಜಿಲ್ಲೆಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಅದರಲ್ಲೂ ಬೆಳಗಾವಿ ಭಾಗದಲ್ಲಿ ಮಳೆ ಮುಂದುವರೆದ ಹಿನ್ನೆಲೆ ಪ್ರವಾಹದಂತಹ ವಾತಾವರಣ ನಿರ್ಮಾಣವಾಗಿದೆ.
ಹಾಗಾದರೆ ಏನೆಲ್ಲ ಅನಾಹುತಗಳು ಸಂಭವಿಸಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಸುರಿಯುತ್ತಿರುವ ಹಿನ್ನೆಲೆ ಕೆರೆ, ಹಳ್ಳ-ಕೊಳ್ಳ, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಜಿಲ್ಲೆಯ ನಿಂಗಾಪುರ ಗ್ರಾಮಕ್ಕೆ ಹೊಂದಿಕೊಂಡಿರುವ ಹುಲಿಕೆರೆ ಹಿನ್ನೀರಿನಲ್ಲಿ ಗಾಳಿ ತುಂಬಿದ ಟ್ಯೂಬ್ ಮೂಲಕವೇ ವಿದ್ಯಾರ್ಥಿಗಳು ಶಾಲೆಗೆ ತೆರಳುವ ಪರಿಸ್ಥಿತಿ ಎದುರಾಗಿದೆ. ಮಳೆ ಬಂತೆದಂರೆ ಸಾಕು ಯಾವುದೇ ಪರ್ಯಾಯ ದಾರಿಯಿಲ್ಲದೆ, ಕಲಿಕೆಗಾಗಿ ಈ ಹಿನ್ನೀರನ್ನೂ ದಾಟಿಕೊಂಡೇ ಹೋಗುತ್ತಿದ್ದೇವೆ ಎಂದು ಮಕ್ಕಳು ಅಳಲು ತೋಡಿಕೊಂಡಿದ್ದಾರೆ.
ವಿದ್ಯಾರ್ಥಿಗಳು ಜೀವವನ್ನು ಅಂಗೈಯಲ್ಲಿಡಿದು ಗಾಳಿ ತುಂಬಿದ ಟ್ಯೂಬೇ ಅನ್ನೇ ಬಳಸಿಕೊಂಡು ಕೆರೆ ಹಿನ್ನೀರು ದಾಟಿ ಶಾಲೆಗೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಈ ದೃಶ್ಯ ನೋಡಿದರೆ, ಎಂಥಹವರ ಎದೆ ಝೆಲ್ ಎನಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.
ಗಾಳಿ ತುಂಬಿದ ಟ್ಯೂಬ್‌ಗೆ ಹಗ್ಗ ಕಟ್ಟಿ ಎಳೆದು ಮಕ್ಕಳನ್ನು ಈ ಕೆರೆಯನ್ನು ಪ್ರತಿನಿತ್ಯ ದಾಟಿಸುತ್ತಿದ್ದು, ಇದು ಸ್ವಲ್ಪ ಆಯ ತಪ್ಪಿದರೂ ಸಹ ಮಕ್ಕಳು ಕೆರೆ ಪಾಲಾಗುವ ಭೀತಿಯಲ್ಲಿ ಪೋಷಕರು ಇದ್ದಾರೆ. ಈಗಾಗಲೇ ಈ ಭಾಗದಲ್ಲಿ ಸೇತುವೆ ನಿರ್ಮಾಣ ಮಾಡಿ ಕೊಡಿ ಎಂದು 20 ವರ್ಷಗಳಿಂದಲೂ ಅಧಿಕಾರಿಗಳನ್ನು ಕೇಳಿಕೊಳ್ಳುತ್ತಲೇ ಇದ್ದೇವೆ. ಆದರೆ, ಅಧಿಕಾರಿಗಳು ಮಾತ್ರ ಕ್ಯಾರೆ ಅನ್ನುತ್ತಿಲ್ಲ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಆದ್ದರಿಂದ ರಬ್ಬರ್ ಟ್ಯೂಬ್ ಅನ್ನೇ ಇವರು ಬೋಟ್, ಹಿನ್ನೀರು ದಾಟಿಸುವ ದೋಣಿಯಾಗಿ ಮಾಡಿಕೊಂಡಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಈ ಭಾಗದ ಶಾಲಾ ಮಕ್ಕಳಿಗೆ ಅನುಕೂಲ ಆಗುವಂತೆ ಸೇತುವೆ ನೀರ್ಮಾಣ ಮಾಡಿಕೊಡಿ ಎನ್ನುವುದು ಇಲ್ಲಿನ ಸ್ಥಳೀಯರ ಆಗ್ರಹವಾಗಿದೆ.