logo

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ನಿರ್ದೇಶಕರ ಸ್ಥಾನಕ್ಕೆ ಪ್ರೌಢಶಾಲಾ ವಿಭಾಗದಿಂದ ಅವಿರೋಧ ಆಯ್ಕೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವತಿಯಿಂದ ನಿರ್ದೇಶಕರ ಸ್ಥಾನಕ್ಕೆ ಪ್ರೌಢಶಾಲಾ ವಿಭಾಗದಿಂದ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿ ಬಚ್ಚಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಶ್ರೀನಿವಾಸ್ ಜಿ ಹಾಗೂ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಜಯಪ್ರಕಾಶ್ ಎಚ್ಎಸ್ ಸರ್ಕಾರಿ ನೌಕರರ ನಿರ್ದೇಶಕರ ಸಾಲದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ.

ದೈಹಿಕ ಶಿಕ್ಷಣ ಶಿಕ್ಷಕ ಶ್ರೀನಿವಾಸ್ ಜಿ ಮಾತನಾಡಿ, ತಮ್ಮನ ವಿರೋಧವಾಗಿ ಆಯ್ಕೆ ಮಾಡಿದ ಪ್ರೌಢಶಾಲಾ ವಿಭಾಗದ ಪ್ರತಿ ಶಿಕ್ಷಕ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸರ್ಕಾರಿ ನೌಕರರ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ಪರಿಹರಿಸುವ ನಿಟ್ಟಿನಲ್ಲಿ ಶ್ರಮವಹಿಸಲಾಗುತ್ತದೆ. ಉತ್ತಮ ಕಾರ್ಯಗಳನ್ನು ಮಾಡಿ ಸಂಘವನ್ನು ಮತ್ತಷ್ಟು ಬಲಿಷ್ಠ ಗೊಳಿಸಲಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶಿಕ್ಷಕ ಜಯಪ್ರಕಾಶ್ ಎಚ್ಎಸ್ ಮಾತನಾಡಿ, ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ನಿರ್ದೇಶಕರ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಉತ್ತಮ ಆಡಳಿತ ನೀಡುವುದರ ಮೂಲಕ ಪ್ರೌಢಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ಆಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಪ್ರೌಢಶಾಲಾ ವಿಭಾಗದ ಶಿಕ್ಷಕರು ಹಾಗೂ ಮತದಾರರು ವಿಜೇತ ನೂತನ ನಿರ್ದೇಶಕರನ್ನು ಅಭಿನಂದಿಸಿದ್ದಾರೆ.

41
461 views