ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಗೆ ಉತ್ತರ ನೀಡಿದ ಯತ್ನಾಳ್
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಣ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ, ಯತ್ನಾಳ್‌ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿತ್ತು. ಉತ್ತರ ನೀಡಲು 72 ಗಂಟೆ ಗಡುವು ನೀಡಿತ್ತು. ಆದ್ರೆ ಇದೀಗ ಯತ್ನಾಳ್ ಕ ೀಂದ್ರ ಶಿಸ್ತು ಸಮಿತಿ ನೋಟಿಸ್‌ಗೆ ಇ-ಮೇಲ್ ಮೂಲಕ 9 ಪುಟಗಳ ಉತ್ತರ ನೀಡಿದ್ದಾರೆ. ಇದರೊಂದಿಗೆ, ನೋಟಿಸ್ ದೊರೆತ 72 ಗಂಟೆಗಳ ಒಳಗಾಗಿಯೇ ಅವರು ಉತ್ತರ ನೀಡಿದಂತಾಗಿದೆ. ಈ ಮೂಲಕ ಬಿವೈ ವಿಜಯೇಂದ್ರಗೆ ನಡುಕ ಶುರುವಾಗಿದೆ.