logo

ಹೈಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಹಿರಿಯ ವಕೀಲ ಮೃತ

ಹೈಕೋರ್ಟ್‌ನಲ್ಲಿ ಪ್ರಕರಣವೊಂದರ ವಾದ ಮಂಡಿಸುತ್ತಿದ್ದಾಗಲೇ ವಕೀಲರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆಘಾತಕಾರಿ ಘಟನೆ ತೆಲಂಗಾಣ ಹೈಕೋರ್ಟ್‌ನಲ್ಲಿ ಮಂಗಳವಾರ ನಡೆದಿದೆ. ಮಾಹಿತಿ ಪ್ರಕಾರ ಮತರನ್ನು ವೇಣುಗೋಪಾಲ್ ರಾವ್ ಎಂದು ಗುರುತಿಸಲಾಗಿದೆ. ಹಿರಿಯ ವಕೀಲ ರಾವ್ ಅವರು ಕೋರ್ಟ್ ಹಾಲ್ 21 ರಲ್ಲಿ ನ್ಯಾಯಾಧೀಶರ ಮುಂದೆ ವಾದ ಮಂಡಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಉಸ್ಮಾನಿಯಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾಗಿ ವೈದ್ಯರು ದೃಢಪಡಿಸಿದ್ದಾರೆ.

3
1065 views