logo

50ನೇ ವರ್ಷದ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಆಚರಣೆ

ದೇವನಹಳ್ಳಿ :ಪಟ್ಟಣದ ಪುರಸಭಾ ವ್ಯಾಪ್ತಿಯ 14 ನ ವಾರ್ಡಿನಲ್ಲಿ ಡಾ. ಪುನೀತ್ ರಾಜಕುಮಾರ್ ಹುಟ್ಟುಹಬ್ಬವನ್ನು ಮಯೂರ ಯುವಕರ ಸಂಘದ ವತಿಯಿಂದ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಪುರಸಭಾ ಸದಸ್ಯ ಹಾಗು ಮಯೂರ ಯುವಕ ಸಂಘದ ಅಧ್ಯಕ್ಷ ವೈ ಆರ್ ರುದ್ರೇಶ್ ನೇತೃತ್ವದಲ್ಲಿ ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ತಿಂಡಿ ವ್ಯವಸ್ಥೆ ಮಾಡಲಾಗಿತ್ತು. ಅಂಗನವಾಡಿ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಣಾ ಕಾರ್ಯಕ್ರಮ ನಡೆಯಿತು.

ಗೌರವಾಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ವಿನಯ್, ಕಾರ್ಯದರ್ಶಿ ವೈ ಪಿ ಪ್ರವೀಣ್ ಕುಮಾರ್, ನಿರ್ದೇಶಕರಾದ ಪವನ್ ಯಾದವ್, ಮೂರ್ತಿ ಪ್ರಿಂಟರ್ಸ್ ಅಮರ್, ಮಹೇಶ್, ಮಯೂರ ಯುವಕ ಸಂಘದ ಪದಾಧಿಕಾರಿಗಳು ಇದ್ದರು.

ವರದಿ ಹೈದರ್ ಸಾಬ್

0
1618 views