
ಕರ್ನಾಟಕ ಸದನದಲ್ಲಿ ‘ಹನಿಟ್ರ್ಯಾಪ್’ ಕೋಲಾಹಲ.. ವಿಪಕ್ಷಗಳ ತೀವ್ರ ಹೋರಾಟ.
ಹನಿಟ್ರ್ಯಾಪ್ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ಆಗ್ರಹಿಸಿ ವಿಪಕ್ಷಗಳ ಸದಸ್ಯರು ಇಂದು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್ ಖಾದರ್ ಮೇಲೆ ಪೇಪರ್ ಎಸೆದು ಆಕ್ರೋಶ ಹೊರ ಹಾಕಿದರು.
ನಿನ್ನೆ ವಿಜಯಪುರ ಕ್ಷೇತ್ರದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಅವರು ಮೊದಲಿಗೆ ಈ ಹನಿ ಟ್ರ್ಯಾಪ್ ವಿಷಯವನ್ನು ಪ್ರಸ್ತಾಪಿಸಿದರು. ಇದರ ಬಗ್ಗೆ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಇದನ್ನು ಸಿಬಿಐ ವಹಿಸಬೇಕು ಎಂದು ಒತ್ತಾಯ ಮಾಡಿದಾಗ. ಕಾಂಗ್ರೇಸ್ ಮಂತ್ರಿಗಳು ರಾಜಣ್ಣ ನವರು ಕೂಡ ಇದನ್ನು ಒಪ್ಪಿಕೊಂಡು ನನ್ನ ಮೇಲೆ ಪ್ರಯತ್ನ ಮಾಡಿದ್ದರು, ಹಾಗೂ ಇನ್ನು 48ಜನರ ಮೇಲೆ ಹನಿ ಟ್ರ್ಯಾಪ್ ಆಗಿದೆ ಎಂದರು. ಆಗ ಸದನದಲ್ಲಿ ವಿರೋಧ ಪಕ್ಷದವರು ಕೂಡ ಒತ್ತಾಯ ಮಾಡಿದರೂ ನಂತರ ಗೃಹಮಂತ್ರಿಗಳು ಇದರ ಬಗ್ಗೆ ಇನ್ನು ಯಾರು ದೂರು ಕೊಟ್ಟಿಲ್ಲ, ಕೊಟ್ಟರೆ ಉನ್ನತ ಮಟ್ಟದ ತನಿಖೆ ಮಾಡಿಸುತ್ತೇವೆ ಎಂದರು.
ಇಂದು ವಿಧಾನಸಭೆಯ ಅಧಿವೇಶನದ ಕೊನೇ ದಿನ. ಹೀಗಾಗಿ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಶಾಸಕ ಸುನಿಲ್ ಕುಮಾರ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರದ ಸಚಿವರೇ ತನ್ನ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂದು ಆರೋಪಿಸಿದ್ದಾರೆ. ಆದರೆ ಸರ್ಕಾರ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಆಕ್ರೋಶ ಹೊರ ಹಾಕಿದರು.
ಜಡ್ಜ್‌ಗಳ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂದು ಸಚಿವ ರಾಜಣ್ಣ ಹೇಳಿದ್ದಾರೆ. ಹೀಗಾಗಿ ಸರ್ಕಾರ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ವಿಪಕ್ಷಗಳ ಸದಸ್ಯರು ಆಗ್ರಹಿಸಿದರು. ವಿಪಕ್ಷಗಳ ಆಗ್ರಹಕ್ಕೆ ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಅವರು ಈ ಪ್ರಕರಣವನ್ನುಗಂಭೀರವಾಗಿ ಸ್ವೀಕರಿಸಿ ಉನ್ನತ ಮಟ್ಟದ ತನಿಖೆ ನಡೆಸುತ್ತೇವೆ ಎಂದರು. ಆದ್ರೆ ವಿಪಕ್ಷಗಳು CBI ತನಿಖೆಗೆ ಆಗ್ರಹಿಸಿ ಪ್ರೊಟೆಸ್ಟ್ ನಡೆಸಿದ್ರು.
ಇದಾದ ಬಳಿಕ ಸಿಎಂ ಸಿದ್ದರಾಮಯ್ಯನವರು ಬಜೆಟ್ ಭಾಷಣಕ್ಕೆ ಉತ್ತರ ನೀಡಲು ಆರಂಭಿಸಿರು. ಈ ವೇಳೆ ವಿಪಕ್ಷ ಸದಸ್ಯರು ಬಾವಿಗೆ ಇಳಿದು ಪ್ರತಿಭಟಿಸಿದರು. ವಿಪಕ್ಷಗಳ ಪ್ರತಿಭಟನೆಗೆ ಕ್ಯಾರೇ ಎನ್ನದ ಸಿಎಂ ತಮ್ಮ ಭಾಷಣವನ್ನು ಮುಂದುವರಿಸಿದರು.