logo

ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಗುರಿ : ಸಚಿವ ಮುನಿಯಪ್ಪ

ಬೆಂ. ಗ್ರಾ. ಜಿಲ್ಲೆ: ದೇವನಹಳ್ಳಿ ತಾಲೂಕಿನ ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಈಗಾಗಲೇ ಗುರ್ತಿಸಿಲಾಗಿದ್ದು, ಏಪ್ರಿಲ್ ಮಾಹೆಯಲ್ಲಿ 2500 ನಿವೇಶನ ಹಂಚಿಕೆ ಮಾಡುವ ಗುರಿ ಇದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಮಂಗಲ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ 2025ನೇ ಸಾಲಿನ ಗ್ರಾಮ ಸಭೆಯಲ್ಲಿ ಮಾತನಾಡಿದ ಸಚಿವರು ಮಾರ್ಚ್ ಅಂತ್ಯದಲ್ಲಿ ನಿವೇಶನ ನೀಡುವ ಗುರಿ ಹೊಂದಲಾಗಿತ್ತು ಕಾರಣಾಂತರಗಳಿಂದ ಮುಂದಿಡಲಾಗಿದ್ದು ಏಪ್ರಿಲ್ ಮಾಹೆಯಲ್ಲಿ ದೊಡ್ಡಮಟ್ಟದಲ್ಲಿ ಕಾರ್ಯಕ್ರಮ ಏರ್ಪಡಿಸಿ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದರು.

ಪ್ರತಿ ಗ್ರಾಮ ಪಂಚಾಯತಿಯಲ್ಲಿ ಹೊಸ ಮಾದರಿ ಶಾಲೆಗಳ ನಿರ್ಮಾಣದ ಗುರಿಯನ್ನು ಹೊಂದಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಲಭ್ಯವಾದಲ್ಲಿ ಭವಿಷ್ಯದಲ್ಲಿ ಮಕ್ಕಳು ಉನ್ನತ ಹುದ್ದೆಗಳನ್ನು ಪಡೆಯಲು ಸಹಕಾರಿಯಾಗುತ್ತೆ ಎಂದು ಹೇಳಿದರು.

ಈ ವೇಳೆ ಗ್ರಾಮ ಸಭೆಯಲ್ಲಿ ವಿಶೇಷಚೇತನರಿಗೆ ಸೋಲಾರ್ ಕಿಟ್ ವಿತರಣೆ , ತಾಂತ್ರಿಕ ಮತ್ತು ವೈದ್ಯಕೀಯ ಪದವಿಯ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳ ವಿತರಣೆ, ತರಬೇತಿ ಪಡೆದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಸಿ.ಮಂಜುನಾಥ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್‍ಯದರ್ಶಿ ಕೆ.ಆರ್.ನಾಗೇಶ್, ಬಯಪ ಅಧ್ಯಕ್ಷ ಶಾಂತಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಗನ್ನಾಥ, ಕನ್ನಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಲಿನಿ, ಉಪಾಧ್ಯಕ್ಷೆ ವನಜಾಕ್ಷಿಮ್ಮ, ಸದಸ್ಯರಾದ ಎಸ್‌ಜಿ ಮಂಜುನಾಥ್, ಲಕ್ಷ್ಮೀಕಾಂತ, ನಾಗೇಶ್, ಸೋಮಶೇಖರ್, ಮೋಸಿನಾತಾಜ್, ಅಂಬರೀಶ್, ಅಂಬುಜಾ, ಕೃಷ್ಣಯ್ಯ, ನರಸಿಂಹಮೂರ್ತಿ, ಇನ್ನಿತರ ಸದಸ್ಯರು, ಪಿಡಿಒ ಶ್ರೀನಿವಾಸ್, ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ: ಹೈದರ್‌ಸಾಬ್

43
2439 views