ಬಾಬು ಜಗಜೀವನ್ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು. ಇಂತಹ ಮಹಾನ್ ನ
ಬಾಬು ಜಗಜೀವನ್ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು. ಇಂತಹ ಮಹಾನ್ ನಾಯಕರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ನಮ್ಮ ಸರ್ಕಾರ ಇಂದು ಮಾಡಿದೆ.ಬಾಬು ಜಗಜೀವನ್ ರಾಮ್ ಅವರು ದೇಶ ಕಂಡ ಮುತ್ಸದ್ದಿ ನಾಯಕರು. ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು. ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ಎಲ್ಲಾ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು. ಅವರು ನಮ್ಮೊಂದಿಗೆ ಇಲ್ಲದಿದ್ದರೂ, ಹೆಜ್ಜೆಗುರುತುಗಳನ್ನು ಬಿಟ್ಟುಹೋಗಿದ್ದಾರೆ. "ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ, ಅದರ ಉದ್ಧಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ" ಎಂದು ನುಡಿದ ಅವರು ಅಪ್ರತಿಮ ದೇಶಭಕ್ತರೂ ಆಗಿದ್ದರು. ದೇಶಕ್ಕೆ ಮಾದರಿ ಎನ್ನುವ ನಾಯಕರು. ಅವರ ಜಯಂತಿಯಂದು ಗೌರವ ನಮನ ಸಲ್ಲಿಸುತ್ತೇನೆ. - ಇಂದು ಬಾಬು ಜಗಜೀವನ್ ರಾಮ್ ಅವರ ಜಯಂತಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಬಾಬೂಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಾಧ್ಯಮಗಳ ಜೊತೆ ಮಾತನಾಡಿದೆ