logo

ಬೆಂಗಳೂರಿನಲ್ಲಿ ಕೊರೋನಾಗೆ ಮೊದಲ ಬಲಿ: ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆ!

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆತಂಕ ಹೆಚ್ಚುತ್ತಿದ್ದು ಬೆಂಗಳೂರಿನಲ್ಲಿ ಕೊರೋನಾಗೆ ವ್ಯಕ್ತಿಯೋರ್ವ ಬಲಿಯಾಗಿದ್ದಾನೆ. ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದ್ದು ಒಟ್ಟು 38 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆತಂಕ ಹೆಚ್ಚುತ್ತಿದ್ದು ಬೆಂಗಳೂರಿನಲ್ಲಿ ಕೊರೋನಾಗೆ ವ್ಯಕ್ತಿಯೋರ್ವ ಬಲಿಯಾಗಿದ್ದಾನೆ. ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದ್ದು ಒಟ್ಟು 38 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಬೆಂಗಳೂರಿನಲ್ಲಿಯೇ 32 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ. ಕೋವಿಡ್ ಬಂದಿದೆ ಎಂದು ಜನ ಆತಂಕ ಪಡುವ ಅಗತ್ಯವಿಲ್ಲ.‌ ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದರು.

ಕೋವಿಡ್ ತಾಂತ್ರಿಕ ಸಮಿತಿ ನಿನ್ನೆ ಸಭೆ ನಡೆಸಿ ರಾಜ್ಯದಲ್ಲಿ ಕಂಡುಬಂದಿರುವ ಕೋವಿಡ್ ಪ್ರಕರಣಗಳ ಕುರಿತಂತೆ ಚರ್ಚೆ ನಡೆಸಿದೆ. ನಾವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ. ಕೇಂದ್ರ ಸರ್ಕಾರದ ಜೊತೆ ಕೂಡ ಸಂಪರ್ಕದಲ್ಲಿದ್ದೇವೆ. ದೇಶದಲ್ಲಿ ಒಟ್ಟು 257 ಪ್ರಕರಣ ದಾಖಲಾಗಿವೆ. ಕೋವಿಡ್ ಪಾಸಿಟಿವ್ ಹೊಂದಿದವರಿಗೆ ಮೈಲ್ಡ್ ಸಿಂಟಂಸ್ ಇದೆ. ಬಿಟ್ಟರೆ ಗಂಭೀರವಾದ ಸಮಸ್ಯೆಗಳು ಕಂಡುಬಂದಿಲ್ಲ. ಉಸಿರಾಟದ ತೊಂದರೆ ಇರುವವರಿಗೆ, SARI ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಉಸಿರಾಟ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರು ಅಡ್ಮಿಟ್ ಅಗಿರುವ ಆಸ್ಪತ್ರೆಗಳಲ್ಲಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು.

9
494 views