ಬೆಂಗಳೂರು ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ದುರಂತ ಕಾಲ್ತುಳಿತಕ್ಕೆ 11 ಮಂದಿ ಸಾವು
18 ವರ್ಷದ ಖುಷಿ 18 ಗಂಟೆಯೂ ಉಳಿಯಲಿಲ್ಲ; RCB ಸಂಭ್ರಮಾಚರಣೆ ರದ್ದು
ಬೆಂಗಳೂರು ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಇದೀಗ ಸೂತಕದ ಪರಿಸ್ಥಿತಿ ನಿರ್ಮಾಣವಾಗಿದೆ.
ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯವಾಗಿದ್ದಾರೆ. ಈ ಬೆನ್ನಲ್ಲೇ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಸಂಭ್ರಮಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.
ಸ್ಟೇಡಿಯಂನ ಗೇಟ್ ನಂ. 12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಕಾಲ್ತುಳಿತದಲ್ಲಿ 11 ಮಂದಿ ಸಾವನ್‌ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.