ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ!
ಮಹಿಳೆಯೋರ್ವಳು ತನ್ನ ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ. ತಾಯಿ ಲಾವಣ್ಯ(30), ಮಕ್ಕಳಾದ ನಿಹಾರಿಕಾ (12), ನೇಹಾ (9) ಮೃತ ದುರ್ದೈವಿಗಳು. ಲಾವಣ್ಯ ತನ್ನ ಇಬ್ಬರು ಮಕ್ಕಳೊಂದಿಗೆ ಚಿಕ್ಕಬಳ್ಳಾಪುರದ ರಂಗಸ್ಥಳ ಬಳಿಯ ರಂಗಧಾಮ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.