logo

ನಾಡಿನ ಸಂತಶ್ರೇಷ್ಠರ ಸಾನ್ನಿಧ್ಯದಲ್ಲಿ ಮಾಜಿ ಪ್ರಧಾನಮಂತ್ರಿಗಳು ಹಾಗೂ @JanataDal_S ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ನನ್ನ ಪೂಜ್ಯ ತಂದೆಯವರಾದ ಶ್ರೀ @H_D_Devegowda ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ನಾಡಿನ ಸಂತಶ್ರೇಷ್ಠರ ಸಾನ್ನಿಧ್ಯದಲ್ಲಿ ಮಾಜಿ ಪ್ರಧಾನಮಂತ್ರಿಗಳು ಹಾಗೂ @JanataDal_S ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ನನ್ನ ಪೂಜ್ಯ ತಂದೆಯವರಾದ ಶ್ರೀ @H_D_Devegowda ಅವರಿಗೆ ಶ್ರೀ ಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅವರು, ಶ್ರೀ ಸುತ್ತೂರು ಮಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರು, ಶ್ರೀ ಸಿದ್ದಗಂಗಾ ಮಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಅವರು, ಸ್ಫಟಿಕಪುರಿ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮೀಜಿ ಅವರು, ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಮಹಾಸ್ವಾಮೀಜಿ ಅವರು, ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಅವರು, ಶ್ರೀ ಆದಿಚುಂಚನಗಿರಿ ಮಠದ ವಿಜಯನಗರ ಶಾಖಾ ಮಠದ ಶ್ರೀ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ ಅವರು, ವಿಶ್ವ ಒಕ್ಕಲಿಗರ ಮಠದ ಶ್ರೀ ಶ್ರೀ ಶ್ರೀ ನಿಶ್ಚಲಾನಂದ ಸ್ವಾಮೀಜಿ ಅವರುಗಳೆಲ್ಲರೂ ಮಾಜಿ ಪ್ರಧಾನಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವದಿಸಿದರು.

ಮಾಜಿ ಪ್ರಧಾನಿಗಳ ಕುರಿತಾಗಿ ನಾಡಿನ ಹಿರಿಯ ಪತ್ರಕರ್ತರಾದ ಶ್ರೀ ಸುಗತ ಶ್ರೀನಿವಾಸ ರಾಜು ಅವರು ಆಡಿದ ಪ್ರೇರಣಾದಯಕ ನುಡಿಗಳಿಗಾಗಿ ಅವರಿಗೆ ನನ್ನ ಕೃತಜ್ಞತೆಗಳು.

ಮಾಜಿ ಕೇಂದ್ರ ಸಚಿವರಾದ ಶ್ರೀ ಡಿ.ವಿ. ಸದಾನಂದ ಗೌಡರು ಸೇರಿದಂತೆ ಶ್ರೀ ದೇವೇಗೌಡರ ಅಸಂಖ್ಯಾತ ಅಭಿಮಾನಿಗಳು ಈ ಸುಂದರ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇಂತಹ ಸಾರ್ಥಕ ಕ್ಷಣಗಳಿಗೆ ಕಾರಣವಾದ ಹೆಚ್.ಡಿ. ದೇವೇಗೌಡ ಅಭಿನಂದನಾ ಸಮಿತಿ ಸದಸ್ಯರಿಗೆಲ್ಲ ನನ್ನ ಹೃದಯಪೂರ್ವಕ ಧನ್ಯವಾದಗಳು 🙏
#ಶ್ರೀಗಂಗಸಾಮ್ರಾಟ_ಶ್ರೀಪುರುಷಪ್ರಶಸ್ತಿ
#HDDevegowdaru

12
320 views