logo

ಕರ್ನಾಟಕದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ: ಕೊಡಗು ಸೇರಿದಂತೆ ಮಲೆನಾಡಿನಲ್ಲಿ ರೆಡ್ ಅಲರ್ಟ್ ಜೂನ್ 27, 2025

ಬೆಂಗಳೂರು : ರಾಜ್ಯದ ವಿವಿಧ ಭಾಗಗಳಲ್ಲಿ ವರುಣ ಆರ್ಭಟ ಜೋರಾಗಿದ್ದು, ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ನದಿಗಳು ಉಕ್ಕಿ ಹರಿಯುತ್ತಿದೆ. ಇದೀಗ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.


ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಹಾಸನ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆ ಅಬ್ಬರ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.


4
460 views