logo

ಬಂಗಾರಪೇಟೆ 4 ದಿನಗಳಿಂದ ಕುಡಿಯುವ ನೀರಿಲ್ಲ ಗ್ರಾಮಸ್ಥರಿಂದ ಧರಣಿ

ಬಂಗಾರಪೇಟೆ ತಾಲೂಕಿನ ಕಾರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆರ್ನಹಳ್ಳಿ ಗ್ರಾಮದ ಜನತೆ ನಾಲ್ಕು ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಡುತ್ತಿದ್ದು, ಈ ಸಮಸ್ಯೆಗೆ ತಕ್ಷಣದ ಪರಿಹಾರ ನೀಡಬೇಕೆಂದು ಗ್ರಾಮ ಪಂಚಾಯಿತಿ ಕಚೇರಿ ಎದುರು ಇಂದು ಗ್ರಾಮಸ್ಥರಿಂದ ಧರಣಿ ನಡೆಸಿದರು. ಗ್ರಾಮದ ಸುಮಾರು ೨೦೦ಕ್ಕೂ ಹೆಚ್ಚು ಕುಟುಂಬಗಳಿಗೆ ದಿನವೂ ಸರಬರಾಜಾಗುತ್ತಿದ್ದ ಕುಡಿಯುವ ನೀರು ೪ದಿನಗಳಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಅತಿ ಶೀಘ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಸಬೇಕೆಂದು ಮನವಿ ಮಾಡಿದರು.

10
88 views