ಹಾಸನ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ: 112 ಮಕ್ಕಳಲ್ಲಿ ಹೃದಯ ಸಮಸ್ಯೆ
Lokal App
ಹಾಸನ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ: 112 ಮಕ್ಕಳಲ್ಲಿ ಹೃದಯ ಸಮಸ್ಯೆ
ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಮೃತರ ಸಂಖ್ಯೆ ಹೆಚ್ಚಾಗಿರುವುದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಎಲ್ಲಾ ವಯೋವರ್ಗದವರಿಗೂ ಹೃದಯಾಘಾತ ಸಂಭವಿಸುತ್ತಿರುವುದರಿಂದ, ಜಿಲ್ಲೆಯ 1,185 ಶಾಲೆಗಳ 56 ಸಾವಿರ ವಿದ್ಯಾರ್ಥಿಗಳ ಉಚಿತ ಹೃದಯ ತಪಾಸಣೆ ನಡೆಸಲಾಗಿದ್ದು, 112 ಮಕ್ಕಳಲ್ಲಿ ಹೃದಯದ ಸಮಸ್ಯೆ ಕಂಡುಬಂದಿದೆ. ಹೆಚ್ಚಿನ ತಪಾಸಣೆಗಾಗಿ ಆರೋಗ್ಯ ಇಲಾಖೆ ಪೋಷಕರಿಗೆ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ತಜ್ಞರನ್ನು ನೇಮಕ ಮಾಡುವ ಬೇಡಿಕೆ ಹೆಚ್ಚಾಗಿದೆ.