ಅಥಣಿಯ ಶಿವಣಗಿ ಸಾಂಸ್ಕೃತಿಕ ಭವನದಲ್ಲಿ ಅಥಣಿ ತಾಲೂಕಾ ಘಟಕದ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಂದು ಹಮ್ಮಿಕೊಂಡಿದ
ಅಥಣಿಯ ಶಿವಣಗಿ ಸಾಂಸ್ಕೃತಿಕ ಭವನದಲ್ಲಿ ಅಥಣಿ ತಾಲೂಕಾ ಘಟಕದ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಂದು ಹಮ್ಮಿಕೊಂಡಿದ್ದ ಅಥಣಿ ಹಾಗೂ ಕಾಗವಾಡ ತಾಲೂಕು ಮಟ್ಟದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಲಾಯಿತು.
ಅಥಣಿಯ ಸುಕ್ಷೇತ್ರ ಶೆಟ್ಟರಮಠದ ಶ್ರೀ ಮ.ನಿ.ಪ್ರ ಮರುಳಸಿದ್ದ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶಿವಾನಂದ ಬಿದರಿ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ರಾಜು ಕೊಳೊಲಗಿ, ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರೀ ಮಲ್ಲಿಕಾರ್ಜುನ ಕನಶೆಟ್ಟಿ, ತಾಲೂಕಾ ಘಟಕದ ಅಧ್ಯಕ್ಷರಾದ ಶ್ರೀ ಸಂಗಪ್ಪಾ ಉಣ್ಣಿ, ತಾಲೂಕಾ ಉಪಾಧ್ಯಕ್ಷರಾದ ಶ್ರೀ ಶಿವಯೋಗಿ ಗೆಜ್ಜಿ, ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಅಲ್ಲಪ್ಪಾ ನಿಡೋಣಿ, ಗೌರವ ಅಧ್ಯಕ್ಷರಾದ ಶ್ರೀ ಶಂಕರ ಬುರ್ಲಿ, ಸಂಘದ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.