ಚಿಕ್ಕನಹಳ್ಳಿ ಗ್ರಾಮದಲ್ಲಿ ಮಾರಮ್ಮ ದೇವಿ ಜಾತ್ರೆ – ವಿಧಾನಪರಿಷತ್ ಶಾಸಕ ಚಿದಾನಂದ್ ಎಂ ಗೌಡರಿಂದ ವಿಶೇಷ ಪೂಜೆ
ಸಿರಾ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಮಾರಮ್ಮ ದೇವಿ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಜಾತ್ರೆ ಅಂಗವಾಗಿ ಮಾನ್ಯ ಹಾಗೂ ಜನಪ್ರಿಯ ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ ಗೌಡ ರವರು ಶ್ರೀದೇವಿ ಮಾರಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಧಾರ್ಮಿಕ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಉಮೇಶ್ ಹಾಗೂ ಶ್ರೀಮತಿ ಕಾವೇರಮ್ಮ, ಬಿಜೆಪಿ ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ತೇಜೇಶ್ವರ್, ಎಸ್.ಸಿ. ಮೋರ್ಚಾ ಅಧ್ಯಕ್ಷರಾದ ಗುರುಲಿಂಗಪ್ಪ, ಯುವ ಮುಖಂಡರಾದ ಲಕ್ಷ್ಮಿಕಾಂತ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಭಾಸ್ಕರಪ್ಪ ಮತ್ತು ರಂಗನಾಥಪ್ಪ, ಹಾಲು ಒಕ್ಕೂಟದ ಸದಸ್ಯರಾದ ಶ್ರೀಮತಿ ಪುಷ್ಪಾವತಿ, ದೇವರಾಜ್ ಹಾಗೂ ಶ್ರೀಮತಿ ರಾಧಮ್ಮ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು ಜಾತ್ರೆಯೊಡನೆ ಶ್ರದ್ಧೆ ಮತ್ತು ಭಕ್ತಿಗೆ ಮೆರೆತು ನೀಡಿದರು.
ಸ್ಥಳೀಯರು ಜಾತ್ರೆಯಲ್ಲಿ ಭಾಗವಹಿಸಿದ್ದು, ಈ ದೇವಿಯ ಉತ್ಸವವನ್ನು ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ಆಚರಿಸಲಾಯಿತು.