logo

ಕಿಲ್ಲನಕೇರಾ ವಿಶ್ವಭಾರತಿ ಶಾಲೆಯಲ್ಲಿ ಮೂಲಸೌಕರ್ಯ ಕೊರತೆ : ಚಂದಪ್ಪ ಮುನಿಯಪ್ಪನೋರ್ ಆಕ್ರೋಶ

ಯಾದಗಿರಿ : ತಾಲೂಕಿನ ಕಿಲ್ಲನಕೇರಾ ಗ್ರಾಮದಲ್ಲಿನ ವಿಶ್ವ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಸೌಕರ್ಯ ಕೊರತೆ ಕಣ್ಮುಚ್ಚಿ ಕುಳಿತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಚಂದಪ್ಪ ಮುನಿಯಪ್ಪನೋರ್ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಾಲೆಯಲ್ಲಿ ಕಂಪೌಂಡ್ ಇಲ್ಲದ‌ ಕಾರಣ ಮಳೆಗಾಲದಲ್ಲಿ ವಿಷ ಜಂತುಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಪಾಲಕರು ಆತಂಕಕ್ಕೆ‌ ಒಳಗಾಗಿದ್ದಾರೆ.ಅಲ್ಲದೆ, ಕನ್ನಡ ಮಾಧ್ಯಮ ಪರವಾನಗಿ ಪಡೆದು ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲಾಗುತ್ತಿದೆ. ಇನ್ನೂ ಮಕ್ಕಳ ಟಿಸಿ ಕೇಳಲು ಹೋದ ಪಾಲಕರಿಗೆ ಶಾಲಾ ಆಡಳಿತ ಮಂಡಳಿ ಸಾವಿರಾರು ರೂ.ಹಣ ನೀಡುವಂತೆ ಧಮಕಿ ಹಾಕಲಾಗುತ್ತಿದೆಯಂತೆ.
ಹೀಗಿದ್ದರೂ ಸಾರ್ವಜನಿಕರಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಈ ಕೂಡಲೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ
ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.​

3
67 views