ತಾವರೆಕೆರೆಯ ಶ್ರೀ ಶನೇಶ್ವರಸ್ವಾಮಿ ದೇವಾಲಯದ ವಾರ್ಷಿಕೋತ್ಸವ.
ಹೊಸಕೋಟೆ ವಿಧಾನಸಭಾ ಕ್ಷೇತ್ರದ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮದ ಶ್ರೀ ಶನ
ತಾವರೆಕೆರೆಯ ಶ್ರೀ ಶನೇಶ್ವರಸ್ವಾಮಿ ದೇವಾಲಯದ ವಾರ್ಷಿಕೋತ್ಸವ.
ಹೊಸಕೋಟೆ ವಿಧಾನಸಭಾ ಕ್ಷೇತ್ರದ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮದ ಶ್ರೀ ಶನೇಶ್ವರಸ್ವಾಮಿ ದೇವಾಲಯದಲ್ಲಿ ಶ್ರೀ ಶ್ರೀ ಶ್ರೀ ರಾಮಾವಧೂತರ ಆಶ್ರಮ ಟ್ರಸ್ಟ್ ಹಮ್ಮಿಕೊಂಡಿದ್ದ 13ನೇ ವರ್ಷದ ವಾರ್ಷಿಕೋತ್ಸವ ಮತ್ತು ಕಡೆ ಶ್ರಾವಣ ಶನಿವಾರದ ವಿಶೇಷ ಪೂಜಾ ಮಹೋತ್ಸವದಲ್ಲಿ ಭಾಗವಹಿಸಿ, ನಾಡಿನ ಮತ್ತು ಜನತೆಯ ಒಳಿತಿಗಾಗಿ ಭಗವಂತನಲ್ಲಿ ಪ್ರಾರ್ಥಿಸಲಾಯಿತು.
ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ.ವಿ.ಬೈರೇಗೌಡ, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರುಗಳಾದ ಶ್ರೀ ರಾಜಶೇಖರ್ ಗೌಡ, ಶ್ರೀ ಕೋಡಿಹಳ್ಳಿ ಸುರೇಶಣ್ಣ, ಬಮೂಲ್ ನಿರ್ದೇಶಕರಾದ ಶ್ರೀ ಕೆ.ಎಂ.ಎಂ.ಮಂಜುನಾಥ್, ಮುಖಂಡರಾದ ಶ್ರೀ ಟಿ.ಎಸ್.ಆರ್.ರಾಜಶೇಖರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
#ಹೊಸಕೋಟೆ | #hoskote