logo

ಕರ್ನಾಟಕ ಮಂಗಳೂರು ತಲಪಾಡಿ | ಬಸ್, ಆಟೋ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಮೃತ್ಯು

ತಲಪಾಡಿ: ಬಸ್, ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಲಪಾಡಿ ಟೋಲ್ ಗೇಟ್ ಬಳಿ ನಡೆದಿದೆ ಎಂದು ತಿಳಿದು ಬಂದಿದೆ.

ಇಂದು ಮಧ್ಯಾಹ್ನ ಕೆಸಿ ರೋಡ್ ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಮೇಲಿನ ತಲಪಾಡಿ ಅಪಘಾತ ನಡೆದಿದ್ದು ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ 5 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎಂದು ವರದಿಯಾಗಿದೆ.

ಈ ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ

1
0 views