logo

ಕಾರಹಳ್ಳಿ ಎಂಪಿಸಿಎಸ್ ಮಾಜಿ ಅಧ್ಯಕ್ಷ ಎಸ್ ಬೈರೇಗೌಡ ನಿಧನ


ಕಾರಹಳ್ಳಿ ಎಂಪಿಸಿಎಸ್ ಮಾಜಿ ಅಧ್ಯಕ್ಷ ಎಸ್ ಬೈರೇಗೌಡ ನಿಧನ
ಅಂಗಾಂಗ ದಾನ

ದೇವನಹಳ್ಳಿ: ತಾಲೂಕಿನ ಕಾರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಎಸ್ ಬೈರೇಗೌಡ (68) ಇತ್ತೀಚೆಗೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಇವರಿಗೆ ಪತ್ನಿ, ಒಬ್ಬ ಪುತ್ರ ಒಬ್ಬ ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
ಆಗಸ್ಟ್ 29ರಂದು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಹಾಲನ್ನು ಹಾಕಿಕೊಂಡು ಮನೆಗೆ ಬರುವ ವೇಳೆಯಲ್ಲಿ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯವಾಗಿತ್ತು.

ಬೆಂಗಳೂರಿನ ಆಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಆಸ್ಟರ್ ಆಸ್ಪತ್ರೆಗೆ ಬೈರೇಗೌಡರ ದೇಹದ ಅಂಗಾಂಗವನ್ನು ದಾನ ಮಾಡಿದ್ದಾರೆ.
ಸೆಪ್ಟಂಬರ್ 2 ರಂದು ಕಾರಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆಯನ್ನು ನಡೆಸಲಿದ್ದಾರೆ.

ಇವರ ನಿಧನಕ್ಕೆ ದೇವನಹಳ್ಳಿ ತಾಲೂಕು ಜೆಡಿಎಸ್ ಅಧ್ಯಕ್ಷ ಆರ್ ಮುನೇಗೌಡ, ತಾಲೂಕು ಸೊಸೈಟಿ ಮಾಜಿ ಅಧ್ಯಕ್ಷ ಎ ದೇವರಾಜು, ತಾಪಂ ಮಾಜಿ ಸದಸ್ಯ ಕಾರಹಳ್ಳಿ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು, ವಿಎಸ್ಸೆಎನ್ ಅಧ್ಯಕ್ಷರು ಮತ್ತು ಸದಸ್ಯರುಗಳು, ಗ್ರಾಮದ ಮುಖಂಡರುಗಳು ಸಂತಾಪ ಸೂಚಿಸಿದ್ದಾರೆ.

73
2548 views