logo

*ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ* ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಅಶ್ವಿನಿ ಬಡಾವಣೆಯ (ದ.ರಾ.ಬೇಂದ್ರೆ ನಗರ)

*ಮುಖ್ಯಮಂತ್ರಿಯವರ ಕಚೇರಿಯಿಂದ ಮಾಧ್ಯಮ ಪ್ರಕಟಣೆ*

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಅಶ್ವಿನಿ ಬಡಾವಣೆಯ (ದ.ರಾ.ಬೇಂದ್ರೆ ನಗರ) ಚರಂಡಿಗಳಲ್ಲಿ ನೀರು ಸಂಗ್ರಹವಾಗಿ ಕೆಟ್ಟ ವಾಸನೆ ಬರುತ್ತಿರುತ್ತದೆ. ಜೊತೆಗೆ ಗಿಡ ಗಂಟಿಗಳು ಬೆಳೆದು ಗ್ರಾಮವು ಅನೈರ್ಮಲ್ಯದಿಂದ ಕೂಡಿದ್ದು ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಯವರ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಸದರಿ ಗ್ರಾಮಕ್ಕೆ ಆರೋಗ್ಯ ಶಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೌರಕಾರ್ಮಿಕರಿಂದ ಬಡಾವಣೆಯಲ್ಲಿರುವ ಗಿಡಗಂಟೆಗಳನ್ನು ತೆರವುಗೊಳಿಸಿ, ಚರಂಡಿಯನ್ನು ಸ್ವಚ್ಛಗೊಳಿಸಲಾಗಿರುತ್ತದೆ ಎಂದು ಗುಂಡ್ಲುಪೇಟೆ ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

0
0 views