logo

ದೊಡ್ಡಬಳ್ಳಾಪುರ ಕ್ಷೇತ್ರದ ವೀರಾಪುರ, ತಿರುಮಗೊಂಡನಹಳ್ಳಿ ಮತ್ತು ಯಲ್ಲಾಪುರ ಕ್ರಾಸಿಂಗ್‌ನಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣ

ದೊಡ್ಡಬಳ್ಳಾಪುರ ಕ್ಷೇತ್ರದ ವೀರಾಪುರ, ತಿರುಮಗೊಂಡನಹಳ್ಳಿ ಮತ್ತು ಯಲ್ಲಾಪುರ ಕ್ರಾಸಿಂಗ್‌ನಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣ, ಕಸ್ಬಾಗ್‌ ರೈಲ್ವೆ ಕ್ರಾಸಿಂಗ್‌ನಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮತ್ತು ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಿಂದ ಚಿಕ್ಕಬಳ್ಳಾಪುರ ರಸ್ತೆಗೆ ಹೋಗುವ ಎಳ್ಳುಪುರ ರಸ್ತೆಯನ್ನು ಅಭಿವೃದ್ಧಿಪಡಿಸಿ ಹಾಲಿ ಇರುವ ಏಕ ಮುಖರಸ್ತೆಯನ್ನು ದ್ವಿಮುಖ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವಂತೆ ಕೋರಿ ಮನವಿ ಈ ಮೊದಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅವರೊಂದಿಗೆ ವಿವರಗಳನ್ನು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಇಂಜಿನಿಯರ್‌ ಶ್ರೀ ಪ್ರೇಮ್‌ ನಾರಾಯಣ್‌, ಉಪ ಮುಖ್ಯ ಇಂಜಿನಿಯರ್‌ ಶ್ರೀ ಅನಂತ್‌ ಪ್ರಕಾಶ್‌, ಹಿರಿಯ ವಿಭಾಗಾಧಿಕಾರಿಗಳಾದ ಶ್ರೀ ಮಂಜುನಾಥ್‌ ಪಿ., ಇಲಾಖಾ ಅಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

4
704 views