
ಮೇಳ್ಯಾ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಂಗೀತಾ ಅವಿರೋಧ ಆಯ್ಕೆ.
ಗೌರಿಬಿದನೂರು. ಮೆಳ್ಯಾ ಗ್ರಾಮಪಂಚಾಯಿತಿ ಹಿಂದಿನ ಅಧ್ಯಕ್ಷೆ ರತ್ನಮ್ಮ ಅವರ ರಾಜೀನಾಮೆಯಿಂದಾ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಿಗದಿಪಡಿಸಲಾಗಿತ್ತು.
ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 16 ಮಂದಿ ಸದಸ್ಯರ ಬಲಹೊಂದಿರುವ ಮೇಳ್ಯ ಗ್ರಾಮ ಪಂಚಾಯಿತಿ, ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.
ಅಧ್ಯಕ್ಷ ಸ್ಥಾನಕ್ಕೆ ಸಂಗೀತಾ ಅವರೊಬ್ಬರೆ ನಾಮಪತ್ರವನ್ನು ಸಲ್ಲಿಸಿದ್ದು, ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ತಹಶೀಲ್ದಾರ್ ಅರವಿಂದ್ ಅವರು ಸಂಗೀತಾ ಅವರನ್ನು ಅವಿರೋಧವಾಗಿ ಆಯ್ಕೆಮಾಡಿ ಘೋಷಿಸಿದರು.
ಸಂಗೀತಾ ಅವರು ಮೇಳ್ಯ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಅವರ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು.
ನಂತರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ
ಸಂಗೀತಾ ಅವರು ತನ್ನನು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೂ ಕೃತಜ್ಞತೆಯನ್ನು ಸಲ್ಲಿಸಿ ಮಾತನಾಡುತ್ತಾ, ನನ್ನ ಅಧಿಕಾರ ಅವಧಿಯಲ್ಲಿ ಎಲ್ಲಾ ಸದಸ್ಯರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಆಡಳಿತ ನೀಡುವುದಾಗಿ ಹಾಗು ವಿಶೇಷವಾಗಿ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಶ್ರದ್ದೆಯಿಂದ ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ರಾಮ ಲಕ್ಷ್ಮಮ್ಮ, ಸದಸ್ಯರಾದ ರಾಮಚಂದ್ರರೆಡ್ಡಿ, ಗಂಗಾಧರಪ್ಪ,ನಾಗೇಶ್, ವೆಂಕಟೇಶ್ ಗೌಡ, ಹರೀಶ್, ಅಂಜನ್ ರೆಡ್ಡಿ, ರಾಮಾಂಜಿನಪ್ಪ, ಅಂಜಿನಪ್ಪ ಚಂದ್ರು ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಚುನಾವ ಣಾಧಿಕಾರಿಯಾಗಿ ತಹಸೀಲ್ದಾರ್ ಅರವಿಂದ್ ಕೆ ಎಂ ಕಾರ್ಯನಿರ್ವಹಿಸಿದ್ದರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗು ಸಿಬ್ಬಂದಿ ಹಾಜರಿದ್ದರು.