ಗೌರಿಬಿದನೂರಿನ ಯಶಸ್ವಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬ್ಯಾಸ್ಕೆಟ್ ಬಾಲ್ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.
ಗೌರಿಬಿದನೂರು: ಜಿಲ್ಲಾ ಪಂಚಾಯಿತಿ ಚಿಕ್ಕಬಳ್ಳಾಪುರ,ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವೆಂಕಟಾದ್ರಿ ಪಿಯು ಕಾಲೇಜು , ವಿಜಯ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಚಿಂತಾಮಣಿಯ ಝಾನ್ಸಿರಾಣಿ ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೌರಿಬಿದನೂರು ನಗರದ ಯಶಸ್ವಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಹಾಗೂ ಬಾಲಕರು ಬ್ಯಾಸ್ಕೆಟ್ ಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಯಶಸ್ವಿ ಕಾಲೇಜಿನ ಪ್ರಾಂಶುಪಾಲರಾದ ಶಶಿಧರ್ ರವರು ಮಾತನಾಡಿ ಜಿಲ್ಲಾ ಮಟ್ಟದ ಕ್ರೀಡಾಕೂಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ಕೋರಿದ ಅವರು ಕಾಲೇಜು ಮತ್ತು ತಾಲ್ಲೂಕಿಗೆ ಹೆಸರು ತಂದಿದ್ದೀರಾ ಎಂದ ಅವರು ಕ್ರೀಡೆಗಳು ವಿದ್ಯಾಭ್ಯಾಸದ ಅವಿಭಾಜ್ಯ ಅಂಗ, ದೈಹಿಕ ಮತ್ತು ಮಾನಸಿಕ ದೃಢತೆಯ ಜತೆಗೆ ಮನಸ್ಸಿನ ಏಕಾಗ್ರತೆ ಮೂಡುತ್ತದೆ ,ಶರೀರ ಆರೋಗ್ಯಕರವಾಗಿದ್ದರೆ ಯಾವುದೇ ಕಾಯಿಲೆಗಳು ಹತ್ತಿರ ಸುಳಿಯುವುದಿಲ್ಲ ಎಂದರು.
ಇದೇ ಸಂದರ್ಭದಲ್ಲಿ ತರಬೇತಿ ದರಾದ ಮಾರುತಿ, ಆಕಾಶ್, ಚಂದನ್, ವೇಣುಗೋಪಾಲ ಮುಂತಾದವರು ಉಪಸ್ಥಿತರಿದ್ದರು.