logo

ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ "ವಿಶ್ವ ಪೋಷಕಾಂಶ ದಿನಾಚರಣೆ"

ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ "ವಿಶ್ವ ಪೋಷಕಾಂಶ ದಿನಾಚರಣೆ" ಕಾರ್ಯಕ್ರಮ ನಡೆಯಿತು
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು ತಾಲ್ಲೂಕು ಕಾನೂನು ಸೇವಾ ಸಮಿತಿ, ಚಿಕ್ಕನಾಯಕನಹಳ್ಳಿ ಶಾಲಾ ಶಿಕ್ಷಣ ಇಲಾಖೆ, ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಮತ್ತು ಚಿಕ್ಕನಾಯಕನಹಳ್ಳಿ ವಕೀಲರ ಸಂಘ ಇವರುಗಳ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಶ್ರೀಮತಿ ಅಪರ್ಣ. ಆರ್. ಉದ್ಘಾಟಿಸಿದರು.

ಕಾರ್ಯಕ್ರಮಕ್ಕೆ ಎಸ್.ಡಿ.ಎಮ್.ಸಿ ಅಧ್ಯಕ್ಷರು ಶ್ರೀ ಮಂಜುನಾಥ ಸ್ವಾಮಿ. ಎಸ್‌.ಎಂ. ಅವರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞರು ಡಾ. ರಾಜೇಂದ್ರ ಪ್ರಸಾದ್ ಅವರು ಪೋಷಕಾಂಶದ ಮಹತ್ವ ಹಾಗೂ ಮಕ್ಕಳ ಆರೋಗ್ಯ ಕುರಿತಂತೆ ಸಂಪನ್ಮೂಲ ಉಪನ್ಯಾಸ ನೀಡಿದರು.

ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ವಕೀಲರ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

0
0 views